ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ದಿನಗಳೊಳಗೆ ಎಫ್‌ಆರ್‌ಪಿ ದರ ಪಾವತಿಸಿ: ಮುಖ್ಯಮಂತ್ರಿ ಕುಮಾರಸ್ವಾಮಿ

Last Updated 22 ನವೆಂಬರ್ 2018, 12:52 IST
ಅಕ್ಷರ ಗಾತ್ರ

ಬೆಂಗಳೂರು:‘ಎಫ್‌ಆರ್‌ಪಿ ದರ ಪಾವತಿಸದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರು ಏಳು ದಿನಗಳೊಳಗೆ ಕಡ್ಡಾಯವಾಗಿ ದರ ಪಾವತಿಸಬೇಕು’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಾಕೀತು ಮಾಡಿದರು.

ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಈ ತೀರ್ಮಾನವಾಗಿದ್ದು,ಪ್ರಸಕ್ತ ಹಂಗಾಮಿನಲ್ಲಿ ಇಂತಹ ಯಾವುದೇ ಗೊಂದಲವಾಗದಂತೆ ಎಚ್ಚರ ವಹಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಮುಖ್ಯಮಂತ್ರಿ ಸೂಚಿಸಿದರು.

‘ಸರ್ಕಾರದ ಮಾರ್ಗಸೂಚಿಗಳಂತೆ ಪ್ರತಿ ರೈತನೊಂದಿಗೆ ಕಡ್ಡಾಯವಾಗಿ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಬೇಕು. ನಂತರ ಕಬ್ಬು ನಿಯಂತ್ರಣ ಮಂಡಳಿಯ ನಿರ್ಣಯಗಳಂತೆ ಆದಾಯ ಹಂಚಿಕೆ ಸೂತ್ರ ಜಾರಿಗೊಳಿಸಬೇಕು.ಇದಲ್ಲದೆ ರೈತರಿಗೆ ತೂಕ ಹಾಗೂ ಇಳುವರಿ ಪ್ರಮಾಣ ನಿಗದಿಯಲ್ಲಿ ಪಾರದರ್ಶಕತೆ ತರಲು ಸರ್ಕಾರ ಹೊರಡಿಸುವ ಸುತ್ತೋಲೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಹೇಳಿದರು.

‘ಕಾರ್ಖಾನೆ ಮಾಲೀಕರಿಗೆವ್ಯವಹಾರದಲ್ಲಿ ಆಗುವ ಏರುಪೇರುಗಳನ್ನು ಸರಿಪಡಿಸಿಕೊಳ್ಳುವ ಸಾಮರ್ಥ್ಯವಿರುತ್ತದೆ. ಆದರೆ, ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಬಾರದಿದ್ದರೆ ಸುಧಾರಿಸಿಕೊಳ್ಳುವುದು ಸಾಧ್ಯವಿಲ್ಲ. ರೈತರ ಹಿತರಕ್ಷಣೆ ಸರ್ಕಾರದ ಕರ್ತವ್ಯ ಆಗಿರುವುದರಿಂದ ಸೂಕ್ತ ದರ ನೀಡುವಂತೆ’ ಎಂದುಕಾರ್ಖಾನೆ ಮಾಲೀಕರಿಗೆ ತಿಳಿಸಿದರು.

2017-18ನೇ ಸಾಲಿನಲ್ಲಿ ಸಕ್ಕರೆ ದರ ಏಕಾಏಕಿ ಕುಸಿದಿದ್ದರಿಂದ ಹಾಗೂ ಇನ್ನಿತರ ವಿವಿಧ ಸಮಸ್ಯೆಗಳ ಕಾರಣದಿಂದ ಈ ಸಮಸ್ಯೆ ತಲೆದೋರಿದೆ ಎಂದು ಮಾಲೀಕರು ಹೇಳಿದರು.ಬಾಗಲಕೋಟೆಯಲ್ಲಿ ₹2,900ಸಾರಿಗೆ ಮತ್ತು ಕಟಾವು ವೆಚ್ಚ ₹650 ಕಡಿತಗೊಳಿಸಿ, ಪ್ರತಿ ಟನ್‌ಗೆ ₹2,250 ದರದಲ್ಲಿ ರೈತರಿಗೆ ಬೆಲೆ ನೀಡಲು ಕಾರ್ಖಾನೆ ಮಾಲೀಕರು ಒಪ್ಪಿಗೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಬಹುತೇಕ ಕಾರ್ಖಾನೆಗಳು ಎಫ್ಆರ್‌ಪಿ ದರಕ್ಕಿಂತ ಹೆಚ್ಚುವರಿ ಹಣವನ್ನು ನೀಡಿವೆ. ಉಳಿದ 9 ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಮ್ಮತಿಸಿದ ಮೊತ್ತ ನೀಡದಿದ್ದರೂ, ಎಫ್ಆರ್‌ಪಿ ದರಕ್ಕಿಂತ ಹೆಚ್ಚಿಗೆ ದರ ಪಾವತಿಸಿರುವುದಾಗಿಮಾಲೀಕರು ತಿಳಿಸಿದರು.

ದೇಶದಲ್ಲಿ ಪ್ರಸ್ತುತ 230 ಲಕ್ಷ ಟನ್ ಸಕ್ಕರೆ ದಾಸ್ತಾನು ಇದೆ. ಹೆಚ್ಚುವರಿ ಉತ್ಪಾದನೆ ಸಮಸ್ಯೆಯನ್ನು ಸರಿಪಡಿಸಲು ಕೇಂದ್ರ ಸರ್ಕಾರ ಕಬ್ಬಿನಿಂದ ಈಥೆನಾಲ್ ಉತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದೆ. ಇದಲ್ಲದೆ ಎಫ್ಆರ್‌ಪಿ ಪಾವತಿ ವೇಳೆಸಕ್ಕರೆ ಕಾರ್ಖಾನೆಗಳು ನಷ್ಟ ಅನುಭವಿಸಿದರೆ ನೆರವಾಗಲು ಸಕ್ಕರೆ ಸ್ಥಿರತೆಯ ನಿಧಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದುಮಾಲೀಕರು ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ವಿವರಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮಾಜಿ ಸಚಿವರಾದ ಎಸ್.ಆರ್. ಪಾಟೀಲ, ಸತೀಶ್ ಜಾರಕಿಹೊಳಿ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ 31 ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಮಾಲೀಕರ ಒಕ್ಕೂಟದ ಅಧ್ಯಕ್ಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT