ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನಲ್ಲಿ ಫಲಪುಷ್ಪ ಪ್ರದರ್ಶನ: ಹರಿದುಬಂದ ಜನಸಾಗರ

ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಹೆಚ್ಚಿದ್ದ ಜನದಟ್ಟಣೆ
Last Updated 26 ಜನವರಿ 2023, 20:02 IST
ಅಕ್ಷರ ಗಾತ್ರ

ಬೆಂಗಳೂರು: ಲಾಲ್‌ಬಾಗ್‌ ಗಾಜಿನ ಮನೆಯಲ್ಲಿ ಆಯೋಜಿಸಿರುವ ‘ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ’ ವೀಕ್ಷಿಸಲು ಗುರುವಾರ ಜನಸಾಗರವೇ ಹರಿದುಬಂದಿತ್ತು.

ಗಣರಾಜ್ಯೋತ್ಸವದ ಅಂಗವಾಗಿ ಶಾಲಾ–ಕಾಲೇಜು, ಕಚೇರಿಗಳಿಗೆ ರಜೆ ಇದ್ದಿದ್ದರಿಂದ ಬೆಳಿಗ್ಗೆಯಿಂದಲೇ ಸಾರ್ವಜನಿಕರು ತಂಡೋಪ
ತಂಡವಾಗಿ ಲಾಲ್‌ಬಾಗ್‌ನತ್ತ ಬರುತ್ತಿದ್ದರು. ಸಂಜೆ ವೇಳೆ ಎತ್ತ ನೋಡಿದರೂ ಜನಜಾತ್ರೆ. ಲಾಲ್‌ಬಾಗ್‌ನ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿತ್ತು. ಇದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ವಿದ್ಯಾರ್ಥಿಗಳು, ಯುವಕರು ‘ಭಾರತ್‌ ಮಾತಾ ಕೀ ಜೈ, ವಂದೇ
ಮಾತರಂ, ಮೇರಾ ಭಾರತ್‌ ಮಹಾನ್‌ ಹೈ’ ಎಂಬ ಜಯಘೋಷ ಕೂಗುತ್ತಿದ್ದರು.

ಲಾಲ್‌ಬಾಗ್ ಮುಖ್ಯ ಗೇಟಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಬೀದಿ ವ್ಯಾಪಾರಿಗಳ ಹಾವಳಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು.

ಲಾಲ್‌ಬಾಗ್‌ ಮೆಟ್ರೊ ನಿಲ್ದಾಣದಲ್ಲಿ ಟಿಕೆಟ್‌ ಖರೀದಿಗೆ ಪ್ರಯಾಣಿಕರು ಹರಸಾಹಸ ಪಡುತ್ತಿದ್ದರು. ಉದ್ಯಾನದ ನಾಲ್ಕು ಪ್ರವೇಶ ದ್ವಾರಗಳ ಪಾದಚಾರಿ ಮಾರ್ಗಗಳಲ್ಲಿ ಕಿರು ಮಾರುಕಟ್ಟೆಗಳೇ ಸೃಷ್ಟಿ ಆಗಿದ್ದು ಜನದಟ್ಟಣೆಗೆ ಕಾರಣವಾಗಿತ್ತು.

ಪ್ರತಿಭೋತ್ಸವ ಅನಾವರಣಕ್ಕೆ ವೇದಿಕೆ: ಲಾಲ್‌ಬಾಗ್‌ನ ಫಲಪುಷ್ಪ ಪ್ರದರ್ಶನದ ಅಂಗವಾಗಿ ಬ್ಯಾಂಡ್‌ ಸ್ಟ್ಯಾಂಡ್‌ನಲ್ಲಿ ಪ್ರತಿಭೆ ಅನಾವರಣ
ಗೊಳಿಸಲು ವೇದಿಕೆಯೊಂದನ್ನು ಕಲ್ಪಿಸಲಾಗಿತ್ತು. ಇದರಲ್ಲಿ ಚಿಣ್ಣರು, ಯುವತಿರು, ಯುವಕರು, ಮಹಿಳೆಯರು, ಪುರುಷರು ಕುಣಿದು ಕುಪ್ಪಳಿಸಿದರು. ಫಲಪುಷ್ಪ ಪ್ರದರ್ಶನಕ್ಕಿಂತ ಹೆಚ್ಚು ಜನರು ಚಿಣ್ಣರ ನೃತ್ಯ, ಸಂಗೀತ ಮತ್ತು ಇತರ ಕಲಾಪ್ರದರ್ಶನಗಳನ್ನು ಆಸ್ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT