ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ಸಿಲಿಂಡರ್ ದರ ಏರಿಕೆ ಖಂಡಿಸಿ, ಇಂಡಿಯನ್ ವೆಹಿಕಲ್ಸ್ ಡ್ರೈವರ್ ಟ್ರೇಡ್ ಯೂನಿಯನ್ ಹಾಗೂ ‘ಸ್ನೇಹಜೀವಿ’ ಚಾಲಕರ ಟ್ರೇಡ್ ಯೂನಿಯನ್ನ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ‘ಮೆಲೋಡಿ’ ಚಾಕೊಲೆಟ್ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಕಳೆದ ಒಂದು ತಿಂಗಳಿಂದ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ಸಿಲಿಂಡರ್ ದರ ಏರಿಕೆ ಆಗುತ್ತಲೇ ಇದೆ. ಇದರಿಂದ ಆಟೊ ಹಾಗೂ ಕ್ಯಾಬ್ ಚಾಲಕರು ಆತಂಕಕ್ಕೆ ಒಳಗಾಗಿದ್ದಾರೆ. ದರ ಏರಿಕೆಯನ್ನು ಕೇಂದ್ರ ಸರ್ಕಾರವು ಸಮರ್ಥನೆ ಮಾಡಿಕೊಳ್ಳುತ್ತಿದೆ. ‘ಎಲೆಕ್ಟ್ರಿಕ್ ವಾಹನ ಬಳಕೆ ಮಾಡಿ’ ಎಂದೂ ಕೇಂದ್ರ ಸರ್ಕಾರವು ಹೇಳುತ್ತಿದೆ. ತಕ್ಷಣವೇ ಇ.ವಿ ವಾಹನ ಖರೀದಿಯೂ ಕಷ್ಟ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು.

ರಾಜ್ಯದಲ್ಲಿ ಲಕ್ಷಾಂತರ ಆಟೊ ಹಾಗೂ ಕ್ಯಾಬ್ಗಳು ಸಾರ್ವಜನಿಕರಿಗೆ ಸೇವೆ ನೀಡುತ್ತಿದ್ದು, ಬೆಲೆ ಏರಿಕೆಯಿಂದ ಚಾಲಕರು ತತ್ತರಿಸುವಂತಾಗಿದೆ. ಎಲ್ಲಾ ದಿನಸಿ ಸಾಮಗ್ರಿಗಳ ಬೆಲೆಯೂ ಜಾಸ್ತಿ ಆಗಿದ್ದು, ಚಾಲಕರಿಗೆ ಕುಟುಂಬ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ದರ ಇಳಿಕೆ ಆಗುವವರೆಗೂ ಪ್ರತಿ ಚಾಲಕರ ಕುಟುಂಬಕ್ಕೆ ತಿಂಗಳಿಗೆ ₹15 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಗಂಡಸಿ ಸದಾನಂದಸ್ವಾಮಿ, ಸ್ನೇಹಜೀವಿ ಸಂತೋಷ್ ಕುಮಾರ್, ರಾಜು ಕನ್ನಡಿಗ, ಸಂಚಾರಿ ಸತೀಶ್ ಮೊದಲಾದವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.