ಬುಧವಾರ, ನವೆಂಬರ್ 13, 2019
28 °C
ತಡೆಹಿಡಿದಿದ್ದ ಅನುದಾನ ಬಿಡುಗಡೆ ಮಾಡಿದ ಯಡಿಯೂರಪ್ಪ

‘ಅನರ್ಹ’ರ ಕ್ಷೇತ್ರಗಳಿಗೆ ಅನುದಾನ

Published:
Updated:

ಬೆಂಗಳೂರು: ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಮೈತ್ರಿ ಸರ್ಕಾರದ ಅವಧಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆಯಾಗಿದ್ದ ಅನುದಾನ ತಡೆಹಿಡಿದಿದ್ದರು. ಆದರೆ ಈಗ ಅನರ್ಹ ಶಾಸಕರ ಕ್ಷೇತ್ರಗಳ ವ್ಯಾಪ್ತಿಗೆ ಮಾತ್ರ ಹಣ ಬಿಡುಗಡೆಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

18 ನಗರ ಸ್ಥಳೀಯ ಸಂಸ್ಥೆಗಳಿಗೆ ₹86.50 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಿದ್ದಾರೆ. ಈ ಎಲ್ಲಾ ನಗರ, ಪಟ್ಟಣ ಪ್ರದೇಶಗಳು ಉಪಚುನಾವಣೆ ಘೋಷಣೆಯಾಗಿರುವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುತ್ತವೆ.

ಹಾಸನ, ಮಂಡ್ಯ, ರಾಮನಗರ ಜಿಲ್ಲೆ ಸೇರಿದಂತೆ ಜೆಡಿಎಸ್ ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ ಎಂಬ ಆರೋಪದ ಮೇಲೆ 139 ನಗರ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆಯಾಗಿದ್ದ ₹642.65 ಕೋಟಿ ವಿಶೇಷ ಅನುದಾನವನ್ನು ತಡೆಹಿಡಿಯಲಾಗಿತ್ತು.

ಈಗ ಉಪಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಹಣ ಬಿಡುಗಡೆ ಮಾಡಲಾಗಿದೆ. ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಅನುಕೂಲ ಮಾಡಿಕೊಡಲು ಅನುದಾನ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರತಿಕ್ರಿಯಿಸಿ (+)