ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ, ಸಾಮಾನ್ಯ ವರ್ಗದಲ್ಲಿ ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗವಾರು ಸಂಘ–ಸಂಸ್ಥೆಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಇದೇ ಮೊದಲ ಬಾರಿ ಕಂತುವಾರು ಅನುದಾನ ಮಂಜೂರು ಮಾಡಲಾಗಿದೆ. ಜಿಲ್ಲಾ ಸಮಿತಿ ಶಿಫಾರಸು ಮಾಡಿದ ಅನುದಾನದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಆಯ್ಕೆಯಾದ ಸಂಘ–ಸಂಸ್ಥೆಗಳಿಗೆ ಮೊದಲ ಕಂತಿನಲ್ಲಿ ಶೇ 31ರಷ್ಟು, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಆಯ್ಕೆಯಾದ ಸಂಘ–ಸಂಸ್ಥೆಗಳಿಗೆ ಮೊದಲ ಕಂತಿನಲ್ಲಿ ಶೇ 33ರಷ್ಟು, ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಸಂಘ–ಸಂಸ್ಥೆಗಳಿಗೆ ಮೊದಲ ಕಂತಿನಲ್ಲಿ ಶೇ 40ರಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ.