ಬೆಂಗಳೂರು: ಪ್ರಸ್ತುತ ಹವಾಮಾನ ವೈಪರಿತ್ಯ ನಿರ್ವಹಣೆ ರೈತರಿಗೆ ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ, ಮಧ್ಯವರ್ತಿಗಳ ಹಾವಳಿ ಇಲ್ಲದೆ, ನೇರ ಮಾರುಕಟ್ಟೆ ಒದಗಿಸುವ ರೈತ ಸಂತೆಗಳಿಂದ ರೈತರಿಗೆ ಹೆಚ್ಚಿನ ಆದಾಯ ಕಲ್ಪಿಸುತ್ತವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಜಿಕೆವಿಕೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ರೈತ ಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರೈತರು ಆರ್ಥಿಕವಾಗಿ ಸದೃಢರಾಗಬೇಕಾದರೆ ತಾವು ಬೆಳೆದ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬೇಕು. ಮುಂದಿನ ದಿನಗಳಲ್ಲಿ ರೈತರ ನೇರ ಮಾರುಕಟ್ಟೆಗೆ ಉತ್ತಮ ಅವಕಾಶಗಳಿವೆ’ ಎಂದು ಹೇಳಿದರು.

‘ಹಿಂದಿನ ದಿನಗಳಲ್ಲಿ ನಡೆಸುತ್ತಿದ್ದ ವಾರದ ಸಂತೆಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಮತ್ತೆ ಆಯೋಜಿಸಬೇಕು. ಇದರಿಂದ ಉತ್ತಮ ಲಾಭಾಂಶದ ಜೊತೆಗೆ ಗ್ರಾಹಕರಿಗೆ ತಾಜಾ ಉತ್ಪನ್ನಗಳನ್ನು ಒದಗಿಸಲು ಅನುಕೂಲವಾಗಲಿದೆ’ ಎಂದರು.

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಅಶೋಕ್ ದಳವಾಯಿ ಮಾತನಾಡಿ, ‘ರೈತ ಸಂತೆಯಲ್ಲಿ ಕಡಿಮೆ ದರದಲ್ಲಿ ತಾಜಾ ಕೃಷಿ ಉತ್ಪನ್ನಗಳು ನೇರವಾಗಿ ಗ್ರಾಹಕರಿಗೆ ತಲುಪಿಸಲಾಗುತ್ತದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ಇಂತಹ ಸಂತೆ ಆಯೋಜನೆ ಮಾಡಿರುವುದರಿಂದ ಗ್ರಾಮೀಣ ಭಾಗದ ಸಂತೆಯ ವಾತಾವರಣ ಇಲ್ಲೂ ಭಾಸವಾಗುತ್ತಿದೆ. ನಗರವಾಸಿಗಳು ಅದರಲ್ಲೂ ಮುಖ್ಯವಾಗಿ ರೈತರು ಈ ಸಂತೆಯ ಲಾಭ ಪಡೆದುಕೊಳ್ಳಬೇಕು’ ಎಂದು ಕರೆ ನೀಡಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ಮಾತನಾಡಿ, ರೈತರು ಹಾಗೂ ಗ್ರಾಹಕರಿಗೆ ಒಂದೇ ಸೂರಿನಡಿ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಕಾಲೇಜು ಹಾಗೂ ವಿಸ್ತರಣಾ ಕೇಂದ್ರಗಳಲ್ಲಿ ಬೆಳೆದ ಕೃಷಿ ಉತ್ಪನ್ನಗಳು ಹಾಗೂ ಕೃಷಿ ತಂತ್ರಜ್ಞಾನ ಮತ್ತು ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

ಬಿತ್ತನೆ ಬೀಜ, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ವಿವಿಧ ಸಸ್ಯಾಭಿವೃದ್ಧಿ ತೋಟಗಾರಿಕಾ ಬೆಳೆಗಳಾದ ಹಣ್ಣು, ಸುಗಂಧ ಮತ್ತು ಔಷಧೀಯ ಸಸ್ಯಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಕರಕುಶಲ ವಸ್ತುಗಳು, ಅಡಿಕೆ ಉತ್ಪನ್ನಗಳು, ಜೇನುಕೃಷಿ, ರಾಸಾಯಿನಿಕ ಮುಕ್ತ ಬೆಲ್ಲ ಸೇರಿದಂತೆ ಅನೇಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತ ಸಂತೆಯ ಅಂಗವಾಗಿ ಹಲಸಿನ ಹಣ್ಣಿನ ಮೇಳ, ತರಕಾರಿಗಳ ಸೆಲ್ಫಿ ಪಾಯಿಂಟ್ ಬಳಿ ಸಾರ್ವಜನಿರಕು ಫೋಟೊ ತೆಗೆಸಿಕೊಳ್ಳುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.