ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ (ಜಿ.ಎಸ್. ಸಂಗ್ರೇಶಿ) ಅವರನ್ನು ನೇಮಿಸಿ ಗುರುವಾರ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದ್ದು, ರಾಜ್ಯ ಚುನಾವಣಾ ಆಯುಕ್ತರನ್ನಾಗಿ ಅವರನ್ನು ನೇಮಿಸಿ ಶುಕ್ರವಾರ ಆದೇಶ ಹೊರಡಿಸಲಾಗಿದೆ.

ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ. ಎಸ್ ಸಂಗ್ರೇಶಿ ಅವರು ನಿಯೋಜನೆ ಮೇರೆಗೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಗುರುವಾರ ಹೊರಡಿಸಲಾಗಿತ್ತು. ಒಂದೇ ದಿನಕ್ಕೆ ಆ ಆದೇಶವನ್ನು ಹಿಂಪಡೆಯಲಾಗಿದೆ.

ರಾಜ್ಯ ಸರ್ಕಾರದ ಶಿಫಾರಸಿನಂತೆ ಚುನಾವಣಾ ಆಯುಕ್ತರನ್ನಾಗಿ ಸಂಗ್ರೇಶಿ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಅವರ ಅಧಿಕಾರದ ಅವಧಿ ಮುಂದಿನ ಐದು ವರ್ಷಗಳವರೆಗೆ ಇರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.