ಶುಕ್ರವಾರ, ಮಾರ್ಚ್ 31, 2023
24 °C

g20 ಪ್ರತಿನಿಧಿಗಳು ಭೇಟಿಯ ಹಿನ್ನೆಲೆ: ಇಂದು ಬನ್ನೇರುಘಟ್ಟ ಉದ್ಯಾನಕ್ಕೆ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಜಿ20 ದೇಶಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಫೆ. 9ರಂದು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ ಘೋಷಿ ಸಲಾಗಿದೆ. ಭದ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉದ್ಯಾನದ ಕಾರ್ಯ ನಿರ್ವಾಹಕ ನಿರ್ದೇಶಕ ಸುನೀಲ್‌ ಪನ್ವಾರ್‌ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಭಾರತ ಜಿ20 ದೇಶಗಳ ಆತಿಥ್ಯ ವಹಿಸಿದೆ. ಈ ಹಿನ್ನೆಲೆಯಲ್ಲಿ ಪರಿಸರ ಮತ್ತು ಹವಾಮಾನ ಸಂಬಂಧ ಕಾರ್ಯಕಾರಿ ಗುಂಪಿನ ಪ್ರತಿನಿಧಿಗಳು ಬನ್ನೇರುಘಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ.

ವಿವಿಧ ದೇಶಗಳ 150 ಪ್ರತಿನಿಧಿಗಳು ಭೇಟಿ ನೀಡುತ್ತಿದ್ದು, ಪ್ರತಿನಿಧಿಗಳನ್ನು ಸ್ವಾಗತಿಸಲು ಬನ್ನೇರುಘಟ್ಟ ಜೈವಿಕ ಉದ್ಯಾನ ಸಜ್ಜಾಗಿದೆ ಎಂದು ತಿಳಿಸಿದ್ದಾರೆ. ಹಾಗಾಗಿ ಉದ್ಯಾನ, ಸಫಾರಿ ಮತ್ತು ಚಿಟ್ಟೆ ಉದ್ಯಾನವು ಭದ್ರತೆ ದೃಷ್ಟಿಯಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಬಿಗಿ ಬಂದೋಬಸ್ತ್: ಪೊಲೀಸರು  ಬುಧವಾರ ದಿಂದಲೇ ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.