ಬುಧವಾರ, ನವೆಂಬರ್ 20, 2019
21 °C
ಮಹಾತ್ಮ ಗಾಂಧಿ 150ನೇ ಜನ್ಮ ವರ್ಷಾಚರಣೆ

ತಿಂಗಳ ಸ್ವಚ್ಛತಾ ಅಭಿಯಾನಕ್ಕೆ ಅಮಿತ್ ಶಾ ಸೂಚನೆ

Published:
Updated:

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಅ. 2ರಿಂದ ಒಂದು ತಿಂಗಳ ಕಾಲ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುವ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜತೆ ಶನಿವಾರ ವಿಡಿಯೊ ಸಂವಾದ ನಡೆಸಿದರು.

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು.

ಸಭೆ: ಸಂವಿಧಾನದ 370ನೇ ವಿಧಿಯ ರದ್ದತಿ ಕುರಿತು ಜನಜಾಗೃತಿ ಮೂಡಿಸಲು ಅರಮನೆ ಮೈದಾನದಲ್ಲಿ ಸೆ.22ರಂದು ಬೆಳಿಗ್ಗೆ 11ಕ್ಕೆ ಸಮಾವೇಶ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌ ಶನಿವಾರ ತಿಳಿಸಿದರು.

 

ಪ್ರತಿಕ್ರಿಯಿಸಿ (+)