ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಮತಗಳ ಮರು ಎಣಿಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಮರು ಮತ ಎಣಿಕೆ ಕೋರಿ ಕ್ಷೇತ್ರದ ಮತದಾರರಾದ ಕೆ.ಎಸ್.ಸುರೇಶ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

2023ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗಾಂಧಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಆಯ್ಕೆಯಾಗಿದ್ದರು. ಅವರ ಪ್ರತಿಸ್ಪರ್ಧಿ ಬಿಜೆಪಿಯ ಸಪ್ತಗಿರಿ ಗೌಡ 105 ಮತಗಳಿಂದ ಪರಾಭವಗೊಂಡಿದ್ದರು. ಹಾಗಾಗಿ ಪುನಃ ಮತ ಎಣಿಕೆ ಮಾಡಬೇಕು. ಈಗಾಗಲೇ ಘೋಷಿಸಿರುವ ಫಲಿತಾಂಶವನ್ನು ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ದಿನೇಶ್ ಗುಂಡೂರಾವ್ ಪರ ಹೈಕೋರ್ಟ್ ವಕೀಲ ಬಿಪಿನ್ ಹೆಗ್ಡೆ ವಾದ ಮಂಡಿಸಿದ್ದರು.

ಟಿಂಗರಿಕರ್ ಅರ್ಜಿ ಪುರಸ್ಕೃತ

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದ ಸಾಕ್ಷಿಯೊಬ್ಬರ ಮೇಲೆ  ಪ್ರಭಾವ ಬೀರಲು ಯತ್ನಿಸಿದ ಆರೋಪದಡಿ 19ನೇ ಆರೋಪಿ ಚನ್ನಕೇಶವ ಬಿ.ಟಿಂಗರಿಕರ್ಗೆ ಜಾಮೀನು ರದ್ದುಪಡಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚನ್ನಕೇಶವ ಬಿ.ಟಿಂಗರಿಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿ ಈ ಕುರಿತಂತೆ ಆದೇಶಿಸಿದೆ.

‘ಅರ್ಜಿದಾರರು ಪ್ರಭಾವ ಬೀರಿದ್ದಾರೆ ಎನ್ನಲಾದ ಸಾಕ್ಷಿಯ ಹೇಳಿಕೆ ದಾಖಲು ಪ್ರಕ್ರಿಯೆ ಮುಕ್ತಾಯವಾಗಿದೆ. ಇದರಿಂದ ಅರ್ಜಿದಾರ ಆರೋಪಿಗೆ ಜಾಮೀನು ಮಂಜೂರು ಮಾಡಿದ್ದ ಆದೇಶ ರದ್ದುಪಡಿಸಿ 2025ರ ಸೆಪ್ಟೆಂಬರ್ 15ರಂದು ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯ ಹೊರಡಿಸಿರುವ ತೀರ್ಪನ್ನು ರದ್ದುಪಡಿಸಲಾಗಿದೆ. ಹಿಂದಿನ ಜಾಮೀನು ಮಂಜೂರಾತಿ ಆದೇಶದಲ್ಲಿ ವಿಧಿಸಲಾಗಿರುವ ಷರತ್ತುಗಳ ಮೇಲೆ ಅರ್ಜಿದಾರರನ್ನು ಜಾಮೀನು ಮೇಲೆ ಬಿಡುಗಡೆ ಮಾಡಬೇಕು. ಅರ್ಜಿದಾರರು ಜಾಮೀನು ಷರತ್ತುಗಳ ಉಲ್ಲಂಘನೆ ಮಾಡಿದರೆ, ಜಾಮೀನು ರದ್ದತಿಗಾಗಿ ಪ್ರಾಸಿಕ್ಯೂಷನ್ (ಪ್ರಕರಣದ ತನಿಖೆ ನಡೆಸಿರುವ ಸಿಬಿಐ) ಮತ್ತೆ ಕೋರಬಹುದು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.