ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಟಿಗಾನಹಳ್ಳಿ ಗ್ರಾ.ಪಂ: ಲಲಿತಾ ಅಧ್ಯಕ್ಷೆ

Last Updated 28 ನವೆಂಬರ್ 2019, 20:17 IST
ಅಕ್ಷರ ಗಾತ್ರ

ಯಲಹಂಕ: ಗಂಟಿಗಾನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಲಲಿತಾ ಚಿಕ್ಕಕೆಂಪಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ರಮ್ಯಾ ಮುನೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕಾಗಿ ಗುರುವಾರ ಚುನಾವಣೆ ನಡೆಯಿತು.ಒಟ್ಟು 12 ಸದಸ್ಯ ಬಲ ಹೊಂದಿರುವ ಪಂಚಾಯಿತಿಯಲ್ಲಿ 11 ಸದಸ್ಯರು ಹಾಜರಾಗಿದ್ದರು.

ಹಿಂದುಳಿದ ವರ್ಗ(ಎ)ಸಾಮಾನ್ಯ ಮಹಿಳೆ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು. ಈ ವರ್ಗಕ್ಕೆ ಸೇರಿದ ಯಾವೊಬ್ಬ ಸದಸ್ಯರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗ(ಬಿ) ಸಾಮಾನ್ಯ ಮಹಿಳೆ ವರ್ಗಕ್ಕೆ ಸೇರಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಲಿತಾ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT