ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್) ಹಾಗೂ ಕೆರೆಗಳಲ್ಲಿ ಕಲ್ಯಾಣಿಗಳ ವ್ಯವಸ್ಥೆ ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
41 ಕೆರೆ ಅಂಗಳದಲ್ಲಿ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆಯನ್ನು ವಾರ್ಡ್‌ಗಳಲ್ಲಿ ಮಾಡಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ.
ಗಣೇಶ ಮೂರ್ತಿ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳನ್ನು ಪಾಲಿಕೆ ವೆಬ್‌ಸೈಟ್ https://apps.bbmpgov.in/ganesh2024/ ನಲ್ಲಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಮಾಂಸ ಮಾರಾಟ ನಿಷೇಧ: ಗಣೇಶ ಚತುರ್ಥಿಯಾದ ಶನಿವಾರ (ಸೆಪ್ಟೆಂಬರ್ 7) ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.