ಸೋಮವಾರ, ಸೆಪ್ಟೆಂಬರ್ 27, 2021
28 °C

ಬೆಂಗಳೂರಿನ ದೇಗುಲಗಳಲ್ಲಿ‌ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ: ಪಂತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ’ ಎಂದು‌ ಪೊಲೀಸ್ ‌ಕಮಿಷನರ್ ಕಮಲ್ ಪಂತ್ ಹೇಳಿದರು.

ನಗರದಲ್ಲಿ‌ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, 'ರಾಜ್ಯ‌ ಸರ್ಕಾರದ ನಿಯಮಗಳನ್ವಯ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಉಳಿದಂತೆ‌, ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿವೆ. ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದರು.

ಓದಿ: ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ, 5ರಂದು ತೀರ್ಮಾನ: ಸಿಎಂ ಬೊಮ್ಮಾಯಿ

'ಸದ್ಯದ ನಿಯಮಗಳ ಪ್ರಕಾರ, ಸಾರ್ವಜನಿಕ ರಸ್ತೆಯಲ್ಲಿ ಮೂರ್ತಿ‌ ಪ್ರತಿಷ್ಠಾಪನೆಗೆ ಯಾವುದೇ ಅವಕಾಶ ನೀಡಿಲ್ಲ' ಎಂದೂ ಅವರು ತಿಳಿಸಿದರು.

'ದೇವಸ್ಥಾನದಲ್ಲಿ‌ ಮೂರ್ತಿ ಪ್ರತಿಷ್ಠಾಪನೆಗೂ‌‌ ಮುನ್ನ ಪೊಲೀಸರು ಹಾಗೂ‌ ಬಿಬಿಎಂಪಿ ಅವರಿಂದ ಅನುಮತಿ‌ ಪಡೆಯಬೇಕು' ಎಂದೂ‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು