ಮಂಗಳವಾರ, ಫೆಬ್ರವರಿ 18, 2020
28 °C
ಗೌರಿ– ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಸಭೆ

‘ಅಪರಾಧಕ್ಕೆ ಆಯೋಜಕರೇ ಹೊಣೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಆಕಸ್ಮಾತ್ ಅಪರಾಧಗಳು ನಡೆದರೆ, ಮೂರ್ತಿ ಪ್ರತಿಷ್ಠಾಪನೆ ಮಾಡುವ ಆಯೋಜಕರನ್ನೇ ಹೊಣೆಯನ್ನಾಗಿ ಮಾಡಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದರು.

ಗೌರಿ–ಗಣೇಶ ಹಬ್ಬದ ಪ್ರಯುಕ್ತ ನಗರ ಪೊಲೀಸ್ ಕಮಿಷನರೇಟ್‌ ವತಿಯಿಂದ ಪುರಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಪಾಲಿಸಬೇಕಾದ ನಿಯಮಗಳ ಬಗ್ಗೆ ತಿಳಿಸಿದರು.

‘ಪೆಂಡಾಲ್ ಸ್ಥಳದಲ್ಲಿ ಹಾಗೂ ಮೆರವಣಿಗೆ ವೇಳೆ ಅಪರಾಧಗಳು ನಡೆಯದಂತೆ ಆಯೋಜಕರು ನೋಡಿ ಕೊಳ್ಳಬೇಕು. ಮಹಿಳೆಯರನ್ನು ಚುಡಾಯಿಸುವ ಹಾಗೂ ಕಿರುಕುಳ ನೀಡುವ ಘಟನೆಗಳು ವರದಿಯಾದರೆ, ಆಯೋಜಕರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಪೊಲೀಸರಿಂದ, ಪೆಂಡಾಲ್ ನಿರ್ಮಾಣಕ್ಕೆ ಬಿಬಿಎಂಪಿಯಿಂದ, ವಿದ್ಯುತ್ ಸಂಪರ್ಕ ಪಡೆಯಲು ಬೆಸ್ಕಾಂನಿಂದ ಅನುಮತಿ ಪಡೆಯುವುದು ಕಡ್ಡಾಯ. ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಅಗ್ನಿಶಾಮಕ ದಳ ಹಾಗೂ ಸಂಚಾರಿ ಪೊಲೀಸರಿಂದ ನಿರಾಕ್ಷೇಪಣಾ ಪತ್ರ ಸಹ ಪಡೆಯಬೇಕು’ ಎಂದರು.

ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯ: ‘ಪೆಂಡಾಲ್‌ಗಳಲ್ಲಿ ಧ್ವನಿವರ್ಧಕ ಬಳಸಲು ಸ್ಥಳೀಯ ಪೊಲೀಸರಿಂದ ಅನುಮತಿ ಪಡೆಯು ವುದು ಕಡ್ಡಾಯ’ ಎಂದು ಭಾಸ್ಕರ್ ರಾವ್ ಹೇಳಿದರು.

‘ಹಿರಿಯ ನಾಗರಿಕರಿಗೆ, ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆ ಆಗದಂತೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಬೇಕು. ನಿಯಮ ಮೀರಿದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಅವರು ತಿಳಿಸಿದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು