ಬೆಂಗಳೂರು: ಗಣೇಶ ಮೂರ್ತಿಯ ಎತ್ತರ, ಆಕಾರ ನಿಗದಿ ಮತ್ತು ಆಚರಣೆಗೆ ದಿನಗಳ ನಿರ್ಬಂಧ ಹೇರುವ ಮೂಲಕ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಆಗ್ರಹಿಸಿದೆ.
ಭಕ್ತರ ಅಭಿಲಾಷೆಯಂತೆ ಮೂರ್ತಿಗಳನ್ನು ಇಟ್ಟು ಪೂಜಿಸಲು ಅವಕಾಶ ಇರಬೇಕು. ಅತ್ಯಂತ ಸೂಕ್ಷ್ಮ ವಿಷಯ ಆಗಿರುವುದರಿಂದ ಗಣೇಶೋತ್ಸವ ಸಮಿತಿಗಳನ್ನು ವಿಶ್ವಾಸಕ್ಕೆ ಪಡೆದು ಸಹಮತದ ನಿಯಮಗಳನ್ನು ರೂಪಿಸಬೇಕು ಎಂದು ಕೋರಿದೆ.
ಗಣಪತಿ ಮೂರ್ತಿ ತಯಾರಿಸುವ ಮತ್ತು ಮಾರಾಟ ಮಾಡುವ ಕಲಾವಿದರು ಮತ್ತು ವ್ಯಾಪಾರಿಗಳು ನಿರ್ಭೀತಿಯಿಂದ ವಹಿವಾಟು ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.