ಬುಧವಾರ, ಸೆಪ್ಟೆಂಬರ್ 22, 2021
21 °C

ವಾರ್ಡ್‌ಗೆ ಒಂದೇ ಗಣೇಶ: ನಿರ್ಬಂಧ ಹಿಂತೆಗೆಯುವಂತೆ ಬಿಬಿಎಂಪಿ ಮುಂದೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿರುವ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಕ್ರಮ ಖಂಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಮತ್ತು ಇತರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. 

‘ವಾರ್ಡ್‌ಗೆ ಒಂದೇ ಗಣೇಶ ಮೂರ್ತಿ ಸ್ಥಾಪನೆ ಮಾಡಬೇಕು, ನಾಲ್ಕು ಅಡಿಗಿಂತ ಎತ್ತರ ಇರಬಾರದು, ಮೂರು ದಿನ ಮಾತ್ರ ಉತ್ಸವ ನಡೆಯಬೇಕು ಎಂಬ ಷರತ್ತುಗಳನ್ನು ವಿಧಿಸುವ ಮೂಲಕ ಹಬ್ಬದ ಆಚರಣೆಗೆ ಅಡ್ಡಿ ಮಾಡಲಾಗುತ್ತಿದೆ. ಈ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ರಾಜು ಒತ್ತಾಯಿಸಿದರು. 

‘12 ಅಡಿ ಎತ್ತರದವರೆಗಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅನುಮತಿ ನೀಡಬೇಕು ಮತ್ತು ಕನಿಷ್ಠ ಐದು ದಿನಗಳವರೆಗಾದರೂ ಉತ್ಸವ ನಡೆಸಲು ಅವಕಾಶ ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

5 ದಿನಗಳ ಕಾಲ ಗಣೇಶೋತ್ಸವಕ್ಕೆ ಅನುಮತಿ: ಆಚರಣೆಗಿರುವ ಷರತ್ತುಗಳ ಪಟ್ಟಿ ಇಲ್ಲಿದೆ

‘ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೆ ನಾವೇ ಸರ್ಕಾರದ ಆದೇಶವನ್ನು ಪಾಲಿಸುತ್ತಿದ್ದೆವು. ಆದರೆ, ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಆದರೂ ಅನೇಕ ಷರತ್ತುಗಳನ್ನು ವಿಧಿಸಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ನಗರದ ವಿವಿಧ ಗಣೇಶೋತ್ಸವ ಸಮಿತಿಗಳು, ಬಿಬಿಎಂಪಿ ಕೇಂದ್ರ ಕಚೇರಿಯ ಆವರಣಕ್ಕೇ ಗಣೇಶ ಮೂರ್ತಿಗಳನ್ನು ತಂದು ಪ್ರತಿಭಟನೆ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು