ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ರೈತರು ಸಲ್ಲಿಸಿರುವ ಅರ್ಜಿಯ ಸ್ಥಿತಿಗತಿ ಕುರಿತ ಮಾಹಿತಿಯನ್ನು ಆನ್ಲೈನ್ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್ನಲ್ಲಿಯೇ ಅವಕಾಶ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಪೋರ್ಟಲ್ನಲ್ಲಿ ಹೊಸ ಆಯ್ಕೆಯನ್ನು ಅನಾವರಣಗೊಳಿಸಿದ ಬಳಿಕ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ, ಸಾರ್ವಜನಿಕರಿಗೆ ಸುಲಭವಾಗಿ ಮಾಹಿತಿ ನೀಡಲು ಈ ಆಯ್ಕೆಯನ್ನು ಪರಿಚಯಿಸಲಾಗಿದೆ ಎಂದಿದ್ದಾರೆ.

‘ಗಂಗಾ ಕಲ್ಯಾಣ’ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಸಣ್ಣ, ಅತಿ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಿಸಿ, ಪಂಪ್ಸೆಟ್ಗಳಿಗೆ ಉಚಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಕೊಳವೆ ಬಾವಿ ಕೊರೆದ ನಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂದರ್ಭದಲ್ಲಿ ಅರ್ಜಿಯು ಯಾವ ಹಂತದಲ್ಲಿದೆ ಎಂದು ತಿಳಿಯಲು ಸಾಧ್ಯವಾಗುತ್ತಿರಲಿಲ್ಲ. ಈಗ ಪೋರ್ಟಲ್ನಲ್ಲೇ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಅರ್ಜಿದಾರರು ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ. ಗಂಗಾ ಕಲ್ಯಾಣ ಯೋಜನೆಯಡಿ ಸಲ್ಲಿಸಿರುವ ಅರ್ಜಿಯ ಐಡಿ, ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ಆಧಾರ್ ಸಂಖ್ಯೆ ಪೈಕಿ ಯಾವುದಾದರೂ ಒಂದನ್ನು ನಮೂದಿಸಿ ಮಾಹಿತಿ ಪಡೆಯಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.