ಶನಿವಾರ, ಸೆಪ್ಟೆಂಬರ್ 25, 2021
22 °C

₹ 10 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೈದರಾಬಾದ್‌ನಿಂದ ಗಾಂಜಾವನ್ನು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ.ಹಳ್ಳಿಯ ಶೇಖ್ ಇದ್ರಿಸ್ (36), ಬೆನ್ಸನ್‌ಟೌನ್ ನಿವಾಸಿ ಖಿಜರ್ (39) ಹಾಗೂ ಡಿ.ಜೆ. ಹಳ್ಳಿಯ ಫೈರೋಜ್ (25) ಬಂಧಿತರು. ಅವರಿಂದ ₹ 10 ಲಕ್ಷ ಮೌಲ್ಯದ 30 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ.

‘ಗಾಂಜಾ ಮಾರಾಟ ಮಾಡಲೆಂದೇ ಆರೋಪಿಗಳು ಗ್ಯಾಂಗ್‌ ಕಟ್ಟಿಕೊಂಡಿದ್ದರು. ಗಾಂಜಾವನ್ನು 10 ಗ್ರಾಂ ಹಾಗೂ 100 ಗ್ರಾಂ ಪೊಟ್ಟಣಗಳಲ್ಲಿ ಹಾಕಿ ₹ 200ರಿಂದ ₹ 500ರವರೆಗೂ ಮಾರಾಟ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಕಾರ್ಪೆಂಟರ್‌ ಹಾಗೂ ಕಟ್ಟಡಗಳ ಒಳಾಂಗಣ ವಿನ್ಯಾಸದ ಸಹಾಯಕರಾಗಿ ಆರೋಪಿಗಳು ಕೆಲಸ ಮಾಡುತ್ತಿದ್ದರು. ಅಕ್ರಮವಾಗಿ ಹಣ ಸಂಪಾದನೆ ಮಾಡುವುದಕ್ಕಾಗಿ ಗಾಂಜಾ ಮಾರಾಟ ಮಾಡಲಾರಂಭಿಸಿದ್ದರು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.