ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

4 ಕೆ.ಜಿ ಗಾಂಜಾ ಸಮೇತ ಇಬ್ಬರ ಬಂಧನ

Last Updated 22 ಜನವರಿ 2021, 19:15 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌.ಟಿ.ನಗರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

‘ಚುಂಚಪ್ಪ ಬ್ಲಾಕ್‌ನ ಇಮ್ರಾನ್ ಪಾಷಾ (26) ಹಾಗೂ ಕೆ.ಜಿ.ಹಳ್ಳಿಯ ಸೈಯದ್ ಇರ್ಫಾನ್ (28) ಬಂಧಿತರು. ಅವರಿಂದ 4 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ಈರುಳ್ಳಿ ಮೈದಾನ ಬಳಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಲಾಗಿತ್ತು. ಪ್ರಕರಣದಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT