ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿದ ವಿವೇಕನಗರ ಠಾಣೆಯ ಪೊಲೀಸರು, ಇಬ್ಬರನ್ನು ಬಂಧಿಸಿ 13 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿಕೊಂಡ ಗಾಂಜಾದ ಮೌಲ್ಯ ₹5.60 ಲಕ್ಷ ಎಂದು ಅಂದಾಜಿಸಲಾಗಿದೆ.

ಒಡಿಶಾದ ಗೋಪಿನಾಥ್ ಸಮಲ್ (43) ಹಾಗೂ ಬಿಹಾರದ ಬಿರೇಂದರ್ ಪಾಂಡೆ ಬಂಧಿತರು.

ಬಿರೇಂದರ್ ಪಾಂಡೆ ಎಂಬಾತ ಠಾಣಾ ವ್ಯಾಪ್ತಿಯ ಆಸ್ಟಿನ್ಟೌನ್ನ ನೀಲಸಂದ್ರ ಚೋರ್ಪಾರ್ಕ್ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಆತನನ್ನು ಬಂಧಿಸಿ ₹60 ಸಾವಿರ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಗೋಪಿನಾಥ್ ಸಮಲ್ ಎಂಬಾತ ಎಎಸ್ಸಿ ಸೆಂಟರ್ ಮಿಲ್ಟ್ರಿ ಕಾಂಪೌಂಡ್ ಪಕ್ಕದ ಪಾದಚಾರಿ ಮಾರ್ಗದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಆತನಿಂದ ₹5 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಖಚಿತ ಮಾಹಿತಿ ಆಧರಿಸಿ, ಎರಡೂ ಕಡೆ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ಹೇಳಿದರು.

ಆರೋಪಿಗಳು ಹೊರರಾಜ್ಯದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.