ಪ್ರಜಾವಾಣಿ ವಾರ್ತೆ

ಬೆಂಗಳೂರು: ಜಾಲಹಳ್ಳಿ ಹಾಗೂ ವಿವೇಕನಗರ ಠಾಣೆಯ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ 17 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಗಾಂಜಾದ ಮೌಲ್ಯ ₹10 ಲಕ್ಷ ಎಂದು ಅಂದಾಜಿಸಲಾಗಿದೆ.

ಎಚ್ಎಂಟಿ ಫ್ಯಾಕ್ಟರಿ ರಸ್ತೆಯ ಕಾಳಿಂಗರಾವ್ ವೃತ್ತದ ಬಳಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಾತ್ಮೀದಾರರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

‘ಒಡಿಶಾದ ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿಸಿ ನಗರಕ್ಕೆ ತಂದು ಕಾಲೇಜು ವಿದ್ಯಾರ್ಥಿಗಳು ಹಾಗೂ ಪೇಯಿಂಗ್ ಗೆಸ್ಟ್ನಲ್ಲಿ ನೆಲಸಿದ್ದ ಖರೀದಿದಾರರಿಗೆ ಮಾರಾಟ ಮಾಡುತ್ತಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

ವಿವೇಕನಗರ ಠಾಣೆಯ ಪೊಲೀಸರು, ಒಡಿಶಾದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು 11 ಕೆ.ಜಿ ಗಾಂಜಾವನ್ನು ಜಪ್ತಿ ಮಾಡಿಕೊಂಡಿದ್ದಾರೆ. ನಗರದ ಪೆಡ್ಲರ್ಗಳಿಂದ ಗಾಂಜಾ ಖರೀದಿಸಿ ಗ್ರಾಹಕರಿಗೆ ಪೂರೈಸುತ್ತಿದ್ದ. ವಿವೇಕನಗರ ಠಾಣೆಯ ಪೊಲೀಸರು ನೀಲಸಂದ್ರದ ಪಾರ್ಕ್ನಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತನಿಂದ 2 ಕೆ.ಜಿ 270 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.