ಬೆಂಗಳೂರು: ಗಾಂಜಾ ಮಾರಾಟ ಜಾಲ ಬೇಧಿಸಿರುವ ಉಪ್ಪಾರಪೇಟೆ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

‘ರಾಕೇಶ್ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ.ಆರೋಪಿಗಳಿಂದ 23 ಕೆ.ಜಿ.320 ಗ್ರಾಂ ತೂಕದ ಗಾಂಜಾ, ₹3 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಅಪರಿಚಿತ ವ್ಯಕ್ತಿಯೊಬ್ಬ ಠಾಣೆ ವ್ಯಾಪ್ತಿಯ ಉದ್ಯಾನವೊಂದರಲ್ಲಿಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಆತನನ್ನು ಬಂಧಿಸಿ ವಿಚಾರಿಸಿದಾಗ ಇತರ ಇಬ್ಬರು ಕೃತ್ಯದಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ನೀಡಿದ್ದ. ಅದರ ಆಧಾರದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಬುಧವಾರ ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.