ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 10 ಲಕ್ಷ ಮೌಲ್ಯದ ಗಾಂಜಾ ಜಪ್ತಿ

Last Updated 7 ಆಗಸ್ಟ್ 2020, 16:18 IST
ಅಕ್ಷರ ಗಾತ್ರ

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಶಿಭಾನಿ ಶಂಕರ್ (26) ಎಂಬಾತನನ್ನು ಬಂಧಿಸಿರುವ ವರ್ತೂರು ಪೊಲೀಸರು, ಆತನಿಂದ ₹10 ಲಕ್ಷ ಮೌಲ್ಯದ 16 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ.

‘ಒಡಿಶಾದ ಶಿಭಾನಿ, ವರ್ತೂರು ಬಳಿಯ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಬಳಿ ಗಾಂಜಾ ಪೊಟ್ಟಣಗಳನ್ನು ಹಿಡಿದುಕೊಂಡು ನಿಂತಿದ್ದ. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಯನ್ನು ಸೆರೆ ಹಿಡಿಯಲಾಯಿತು’ ಎಂದು ಪೊಲೀಸರು ಹೇಳಿದರು.

‘ಆರೋಪಿ ಒಡಿಶಾದಿಂದಲೇ ಗಾಂಜಾವನ್ನು ನಗರಕ್ಕೆ ರೈಲಿನಲ್ಲಿ ತರುತ್ತಿದ್ದ. ಅದನ್ನು ನಗರದಲ್ಲಿ ಗ್ರಾಹಕರಿಗೆ ಮಾರುತ್ತಿದ್ದ. ಈ ಹಿಂದೆಯೂ ಹಲವು ಬಾರಿ ಆತ ಗಾಂಜಾ ತಂದು ಮಾರಾಟ ಮಾಡಿರುವ ಮಾಹಿತಿ ಇದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT