ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟಿಕೆ ಪೊಟ್ಟಣದಲ್ಲಿ ಗಾಂಜಾ

Last Updated 1 ನವೆಂಬರ್ 2020, 18:52 IST
ಅಕ್ಷರ ಗಾತ್ರ

ಬೆಂಗಳೂರು: ಅಮೆರಿಕದಿಂದ ನಗರಕ್ಕೆ ಕೋರಿಯರ್ ಮೂಲಕ ಬಂದಿದ್ದ ಆಟಿಕೆ ವಸ್ತುಗಳ ಪೊಟ್ಟಣದಲ್ಲಿ ಗಾಂಜಾ ಪತ್ತೆಯಾಗಿದ್ದು, ಅದನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಗೊ ಮೂಲಕ ಪೊಟ್ಟಣ ಬಂದಿತ್ತು. ಅನುಮಾನಗೊಂಡು ಅದನ್ನು ತೆರೆದು ನೋಡಿದಾಗ ಆಟಿಕೆ ವಸ್ತುಗಳು ಕಂಡಿದ್ದವು. ಅವುಗಳನ್ನು ಬಿಚ್ಚಿ ನೋಡಿದಾಗ ಅದರೊಳಗೆ ಗಾಂಜಾ ಇತ್ತು’ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ.

‘₹ 72 ಲಕ್ಷ ಮೌಲ್ಯದ 448 ಗ್ರಾಂ. ಗಾಂಜಾ ಜಪ್ತಿ ಮಾಡಲಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪೊಟ್ಟಣದ ಮೇಲಿನ ವಿಳಾಸ ಆಧರಿಸಿ ತನಿಖೆ ಮುಂದುವರಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT