ಮಂಗಳವಾರ, ನವೆಂಬರ್ 30, 2021
20 °C

15 ಕೆ.ಜಿ ಗಾಂಜಾ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಓಕಳಿಪುರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 15 ಕೆ.ಜಿ ಗಾಂಜಾ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಶ್ರೀರಾಮಪುರ ನಿವಾಸಿ ಸತ್ಯ (23) ಬಂಧಿತ ಆರೋಪಿ. ಓಕಳಿಪುರ ಮಾರ್ಗದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.

'ವಿಶಾಖಪಟ್ಟಣದಿಂದ ವ್ಯಕ್ತಿಯೊಬ್ಬ ಗಾಂಜಾ ತಂದುಕೊಡುತ್ತಿದ್ದ. ಮಾರಾಟದ ಹಣದಲ್ಲಿ ಪಾಲು ನೀಡುವುದಾಗಿ ಹೇಳಿದ್ದ' ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ: ಪೀಣ್ಯ ಠಾಣೆ ವ್ಯಾಪ್ತಿಯ ಬಸವೇಶ್ವರ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 2.3 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಎಂ.ಎಸ್.ಪಾಳ್ಯದ ಸಂತೋಷ್ (22), ನೆಲಗದರನಹಳ್ಳಿಯ ಮಂಜುನಾಥ್ (24) ಬಂಧಿತರು.

'ಕೊರೊನಾದಿಂದ ಕೆಲಸ ಇಲ್ಲದ ಕಾರಣ ಮಾಲೂರಿನ ಮೃತ್ಯುಂಜಯ ಎಂಬಾತನಿಂದ ಗಾಂಜಾ ಪಡೆದು ಮಾರುತ್ತಿದ್ದರು' ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.