ಬುಧವಾರ, ಸೆಪ್ಟೆಂಬರ್ 30, 2020
21 °C

ಗಾಂಜಾ-ಕೊಕೇನ್ ಮಾರಾಟ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಾಂಜಾ ಮತ್ತು ಕೊಕೇನ್ ಮಾರುತ್ತಿದ್ದ ನೈಜೀರಿಯಾದ ಇಬ್ಬರನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.

ಹುಣಸಮಾರನಹಳ್ಳಿಯಲ್ಲಿ ನೆಲೆಸಿದ್ದ ಥಾಮಸ್ (46) ಹಾಗೂ ಬಾಗಲೂರಿನಲ್ಲಿದ್ದ  ಇಕೆಚುಕ್ವಾ ಡೇನಿಯಲ್‌ (39) ಬಂಧಿತ ಆರೋಪಿಗಳು.

'ನೈಜೀರಿಯಾದಿಂದ ಬಂದು ನಗರದಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದ ವೇಳೆ ರಾಜೇಶ್ ಎಂಬುವನ ಪರಿಚಯವಾಗಿತ್ತು. ಆತನಿಂದ ಗಾಂಜಾ ಪಡೆದು ಮಾರಾಟ ಮಾಡುತ್ತಿದ್ದೆವು' ಎಂದು ವಿಚಾರಣೆ ವೇಳೆ ತಿಳಿಸಿದ್ದಾರೆ.

ಇವರಿಂದ 2.26 ಕೆ.ಜಿ ಗಾಂಜಾ, 6 ಗ್ರಾಂ ಕೊಕೇನ್ ಹಾಗೂ ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು