ಪೀಣ್ಯ ದಾಸರಹಳ್ಳಿ: ‘ಈ ಭಾಗದಲ್ಲಿ ಕಸದ ಸಮಸ್ಯೆಯಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಮನೆ ಹತ್ತಿರ ಬರುವ ಟಿಪ್ಪರ್ ವಾಹನಗಳಿಗೆ ಹಸಿ ಮತ್ತು ಒಣ ಕಸ ವಿಂಗಡಿಸಿ, ಹಾಕಿ ಸ್ವಚ್ಛತೆ ಕಾಪಾಡಬೇಕು’ ಎಂದು ಶಾಸಕ ಎಸ್.ಮುನಿರಾಜು ಮನವಿ ಮಾಡಿದರು.

ಚಿಕ್ಕಬಾಣಾವರ ಪುರಸಭೆಯ 6 ಮಿನಿ ಟಿಪ್ಪರ್‌ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಚಿಕ್ಕಬಾಣಾವರ ಮುಖ್ಯ ಅಧಿಕಾರಿ ಎಚ್.ಎ.ಕುಮಾರ್ ಮಾತನಾಡಿ, ‘ಸ್ವಚ್ಛ ಭಾರತ ಅಭಿಯಾನ ಹಾಗೂ ಪುರಸಭೆ ಅನುದಾನದಲ್ಲಿ ಮೊದಲ ಬಾರಿಗೆ 6 ಮಿನಿ ಟಿಪ್ಪರ್ ಖರೀದಿಸಲಾಗಿದೆ. ಮನೆ ಮನೆಗೆ ಹೋಗಿ ಕಸ ಸಂಗ್ರಹಕ್ಕೆ ಟಿಪ್ಪರ್ ಬಳಸಲಾಗುತ್ತದೆ. ಒಂದೂವರೆ ಟನ್ ಕಸ ತುಂಬುಲು ಸಾಧ್ಯತೆಯಿರುವ ಎರಡು ಕಂಪಾರ್ಟ್‌ಮೆಂಟ್ ಹೊಂದಿದ್ದು, ಹಸಿ ಮತ್ತು ಒಣಕಸ ಸಂಗ್ರಹಿಸಬಹುದಾಗಿದೆ’ ಎಂದು ಮಾಹಿತಿ ನೀಡಿದರು.

‘ವಿಂಗಡಣೆಯಾದ ಹಸಿ ಕಸವನ್ನು ನಗರಾಭಿವೃದ್ಧಿಯ ಸೂಚನೆಯಂತೆ ದಾಸರಹಳ್ಳಿ ಬಿಬಿಎಂಪಿಗೆ ಕಳುಹಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತೆ 3 ಆಟೊ ಟಿಪ್ಪರ್ ಬರಲಿದ್ದು ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. ಒಟ್ಟು 9 ಗಾಡಿಗಳು ಲಭ್ಯವಾದಲ್ಲಿ ಎಲ್ಲಾ ಏರಿಯಾಗಳಲ್ಲಿ ಕಸ ಸಂಗ್ರಹಿಸಲು ಅನುಕೂಲವಾಗಲಿದೆ. ಒಂದು ದಿನಕ್ಕೆ ಕನಿಷ್ಠ 18 ಟನ್ ಕಸ ಚಿಕ್ಕಬಾಣಾವರ ಪುರಸಭೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುತ್ತದೆ. ಅದರಲ್ಲಿ 10 ಟನ್ ಕಸ ಮಾತ್ರ ವಿಲೇವಾರಿಯಾಗುತ್ತಿದೆ’ ಎಂದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಪರಿಸರ ಎಂಜಿನಿಯರ್ ಹರೀಶ್, ಬಿಜೆಪಿ ಮುಖಂಡರಾದ ಬಿ.ಎಂ.ಚಿಕ್ಕಣ್ಣ, ನವೀನ್, ಕಬೀರ್ ಅಹ್ಮದ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.