ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ವೇತನ ಪರಿಷ್ಕರಣೆಗೆ ಕಾರ್ಮಿಕರ ಒತ್ತಾಯ

‘ಗಾರ್ಮೆಂಟ್ಸ್ ಕಾರ್ಮಿಕರ ಬಗ್ಗೆ ಸರ್ಕಾರದ ನಿರ್ಲಕ್ಷ್ಯ’ ಚರ್ಚಾ ಕಾರ್ಯಕ್ರಮ
Last Updated 3 ಜುಲೈ 2022, 20:12 IST
ಅಕ್ಷರ ಗಾತ್ರ

ಬೆಂಗಳೂರು: ‘ಕನಿಷ್ಠ ವೇತನವನ್ನು ವೈಜ್ಞಾನಿಕ ರೀತಿಯಲ್ಲಿ ಪರಿಷ್ಕರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ವಿವಿಧ ಗಾರ್ಮೆಂಟ್ಸ್‌ಗಳ ಕಾರ್ಮಿಕರು ಒತ್ತಾಯಿಸಿದರು.

ಗಾರ್ಮೆಂಟ್ಸ್ ಆ್ಯಂಡ್ ಟೆಕ್ಸ್‌ಟೈಲ್ಸ್ ಕಾರ್ಮಿಕರ ಒಕ್ಕೂಟ (ಜಿಎಟಿಡಬ್ಲ್ಯುಯು) ಹಾಗೂ ಪರ್ಯಾಯ ಕಾನೂನು ವೇದಿಕೆ (ಎಎಲ್‌ಎಫ್‌) ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಗಾರ್ಮೆಂಟ್ಸ್ ಕಾರ್ಮಿಕರ ಬಗ್ಗೆ ಸರ್ಕಾರದ ನಿರ್ಲಕ್ಷ್ಯ’ ಚರ್ಚಾ ಕಾರ್ಯಕ್ರಮದಲ್ಲಿ ಹಕ್ಕೊತ್ತಾಯ ಮಂಡಿಸಲಾಯಿತು.

‘ಕೆಲಸದ ಸ್ಥಳದಲ್ಲಿ ಮಹಿಳಾ ಕಾರ್ಮಿಕರ ಮೇಲೆ ಕಿರುಕುಳ ನಡೆಯುತ್ತಿದ್ದು, ಇದನ್ನು ತಡೆಯಲು ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಕಾರ್ಮಿಕರು ಕೆಲಸಕ್ಕೆ ಹೋಗಿ ಬರಲು ಸೂಕ್ತ ಸಾರಿಗೆ ವ್ಯವಸ್ಥೆ ಮಾಡಬೇಕು. ವನಿತಾ ಸಂಗಾತಿ ಯೋಜನೆಯನ್ನು ಗ್ರಾಮೀಣ ಕಾರ್ಮಿಕರಿಗೂ ವಿಸ್ತರಿಸಬೇಕು’ ಎಂದೂ ಆಗ್ರಹಿಸಿದರು.

‘ಚಿಕಿತ್ಸಾಲಯ, ಔಷಧಿ, ವೈದ್ಯರ ಕೊರತೆ ನೀಗಿಸಿ ಇಎಸ್‌ಐ ಆರೋಗ್ಯ ಸೇವೆಯನ್ನು ಕಾರ್ಮಿಕ ಸ್ನೇಹಿಯಾಗಿಸಬೇಕು. ಕಾರ್ಮಿಕರ ಮುಖಂಡರ ಮೇಲೆ ಹಲ್ಲೆಗಳು ನಡೆಯುತ್ತಿದೆ. ಕಾರ್ಮಿಕ ಇಲಾಖೆ ಮಧ್ಯಪ್ರವೇಶಿಸಿ, ನ್ಯಾಯ ಕೊಡಿಸಬೇಕು. ನಿರ್ದಿಷ್ಟ ಸಂಖ್ಯೆಯ ಸದಸ್ಯತ್ವ ಇರುವ ಕಾರ್ಮಿಕ ಸಂಘಟನೆಗಳನ್ನು ಮಾನ್ಯ ಮಾಡಲು ಕಾನೂನು ರೂಪಿಸಬೇಕು’ ಎಂದೂ ಕಾರ್ಮಿಕರು ಒತ್ತಾಯಿಸಿದರು.

‘ಗಾರ್ಮೆಂಟ್ಸ್ ಕಾರ್ಖಾನೆ ಕಾರ್ಮಿಕರು ಅನುಭವಿಸುತ್ತಿರುವ ಸಮಸ್ಯೆ ಹಾಗೂ ಸರ್ಕಾರ ತೋರು ತ್ತಿರುವ ನಿರ್ಲಕ್ಷ್ಯ’ ಕುರಿತ ಅಧ್ಯಯನ ವರದಿಯನ್ನು ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT