ಬುಧವಾರ, ಆಗಸ್ಟ್ 4, 2021
21 °C

ಕಾರ್ಮಿಕರ ವಜಾ: ಗಾರ್ಮೆಂಟ್ಸ್‌ ಕಂಪನಿ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪೀಣ್ಯ ದಾಸರಹಳ್ಳಿ: 70ಕ್ಕೂ ಹೆಚ್ಚು ನೌಕರರನ್ನು ಏಕಾಏಕಿ ಕೆಲಸದಿಂದ ತೆಗೆದ ಕಾರಣ ಇಲ್ಲಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್‌ ಕಂಪನಿ ವಿರುದ್ಧ  240ಕ್ಕೂ ಹೆಚ್ಚು ಕಾರ್ಮಿಕರು ಮಂಗಳವಾರ ಪ್ರತಿಭಟನೆ ನಡೆಸಿದರು. ಈ ಪೈಕಿ, 200ಕ್ಕೂ ಹೆಚ್ಚು ಮಹಿಳೆಯರೇ ಇದ್ದರು. 

‘ನಷ್ಟ ಸಂಭವಿಸುತ್ತಿದೆ ಎಂಬ ನೆಪವೊಡ್ಡಿ ಬ್ರಾಂಡಿಸ್‌ ಮ್ಯಾನುಫ್ಯಾಕ್ಚರಿಂಗ್‌ ಕಂಪನಿಯು ನೌಕರರಿಂದ ಬಲವಂತವಾಗಿ ರಾಜೀನಾಮೆ ಪಡೆಯುತ್ತಿದೆ. ನಾವೆಲ್ಲರೂ ಹೆಚ್ಚು ಕೆಲಸ ಮಾಡಲು ಸಿದ್ಧವಿದ್ದೇವೆ. ಆದರೂ, ಮೂರು ತಿಂಗಳಿನಿಂದ ನಮಗೆ ಸಂಬಳ ನೀಡಿಲ್ಲ. ನೌಕರರನ್ನೂ ಕೆಲಸದಿಂದ ತೆಗೆಯಲಾಗುತ್ತಿದೆ’ ಎಂದು ನೌಕರ ದೀಪಕ್‌ ದೂರಿದರು. 

‘ಕಂಪನಿಯಲ್ಲಿ ನಾಲ್ಕೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ಈಗ ಕೆಲಸ ಇಲ್ಲ. ಲಾಕ್‌ಡೌನ್‌ ಘೋಷಣೆಯಾದಾಗಿನಿಂದ ಮೂರು ತಿಂಗಳು ಸಂಬಳವನ್ನೂ ಕೊಟ್ಟಿಲ್ಲ. ಜೀವನ ನಡೆಸಲು ಕಷ್ಟವಾಗಿದೆ’ ಎಂದು ಭಾಗ್ಯ ಅಳಲು ತೋಡಿಕೊಂಡರು. 

ಕಂಪನಿಯ ವ್ಯವಸ್ಥಾಪಕ ನಾಗಭೂಷಣ್‌, ‘ನೌಕರರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಅವರೇ ಈಗ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಎರಡು ತಿಂಗಳು ಸಂಬಳ ನೀಡಿದ್ದೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು