ಬೆಂಗಳೂರು: ‘ಗಾರ್ಮೆಂಟ್ಸ್ಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ಈ ಸೌಲಭ್ಯಗಳನ್ನು ನೀಡದ ಗಾರ್ಮೆಂಟ್ಸ್ಗಳ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಭರವಸೆ ನೀಡಿದರು.

ಸಿವಿಡೆಪ್ ಇಂಡಿಯಾ, ಮುನ್ನಡೆ ಸಾಮಾಜಿಕ ಸಂಸ್ಥೆ, ಸಾಧನಾ ಟ್ರಸ್ಟ್, ಸಮೃದ್ಧಿ ಟ್ರಸ್ಟ್ ಹಾಗೂ ರಾಜ್ಯ ಗಾರ್ಮೆಂಟ್ಸ್ ಮತ್ತು ಟೆಕ್ಸ್ಟೈಲ್ ವರ್ಕರ್ಸ್ ಯೂನಿಯನ್ ಭಾನುವಾರ ಆಯೋಜಿಸಿದ್ದ ಮಹಿಳಾ ಗಾರ್ಮೆಂಟ್ಸ್ ಕಾರ್ಮಿಕರ ಮಹಾ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ನಿಯಂತ್ರಿಸಲು ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಹಾಗೂ ಗಾರ್ಮೆಂಟ್ಸ್ಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ರಚಿಸಲಾಗಿದೆ. ಯಾವುದಾದರೂ ಗಾರ್ಮೆಂಟ್ಸ್ಗಳಲ್ಲಿ ಆಂತರಿಕ ದೂರು ಸಮಿತಿಗಳು ರಚಿಸದಿದ್ದರೆ, ಅದನ್ನು ಮಹಿಳಾ ಆಯೋಗದ ಗಮನಕ್ಕೆ ತರಬೇಕು. ಅಂತಹ ಗಾರ್ಮೆಂಟ್ಸ್ಗಳಿಗೆ ಆಯೋಗದ ಮೂಲಕ ನೋಟಿಸ್ ನೀಡಲಾಗುವುದು’ ಎಂದು ಹೇಳಿದರು.

‘ಗಾರ್ಮೆಂಟ್ಸ್ ಕಾರ್ಮಿಕರ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿ ಪರಿಹಾರ ಕಲ್ಪಿಸುವ ಕೆಲಸವನ್ನು ಮಹಿಳಾ ಆಯೋಗ ಮಾಡಲಿದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರತಿಯೊಬ್ಬರು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಲೇಖಕಿ ಕೆ. ಷರೀಫಾ ಮಾತನಾಡಿ, ‘ಗಾರ್ಮೆಂಟ್ಸ್ ಉದ್ಯಮದಲ್ಲಿ ಕಾರ್ಯನಿರ್ಹಿಸುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ. ಈ ಉದ್ಯಮವು ಮಹಿಳೆಯರನ್ನು ಅವಲಂಬಿಸಿದ್ದು, ಅಧಿಕಾರ ಮಾತ್ರ ಪುರುಷರ ಬಳಿ ಇದೆ. ಇಲ್ಲಿ ಮಹಿಳೆಯರನ್ನು ಶೋಷಣೆ ಮಾಡಲಾಗುತ್ತಿದ್ದು, ಇದರ ವಿರುದ್ಧ ಸಂಘಟಿತರಾಗಿ ಹೋರಾಟ ಮಾಡಬೇಕು’ ಎಂದು ಹೇಳಿದರು.

ನಿವೃತ್ತ ಕುಲಪತಿ ಸಬಿಹಾ ಭೂಮಿಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಮರ್ಶಕಿ ಎಂ.ಎಸ್. ಆಶಾದೇವಿ, ಸಮೃದ್ಧಿ ಟ್ರಸ್ಟ್ ನಿರ್ದೇಶಕ ಬಿ. ಶಿವರಾಜೇಗೌಡ, ಸಿವಿಡೆಪ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕಿ ದೀಪಿಕಾ ರಾವ್ ಉಪಸ್ಥಿತರಿದ್ದರು.

ಲೈಂಗಿಕ ದೌರ್ಜನ್ಯ ತಡೆಗಟ್ಟಲು ಆಂತರಿಕ ದೂರು ಸಮಿತಿ ರಚಿಸಬೇಕು

ಗಾರ್ಮೆಂಟ್ಸ್ನಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಭರವಸೆ

ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಲು ಮಹಿಳೆಯರಿಗೆ ಸಲಹೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.