ಗುರುವಾರ , ಸೆಪ್ಟೆಂಬರ್ 23, 2021
21 °C

ಗ್ಯಾಸ್ ಗೀಸರ್ ಸೋರಿಕೆ; ಎಂಬಿಬಿಎಸ್ ವಿದ್ಯಾರ್ಥಿನಿ ಉಸಿರುಗಟ್ಟಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗ್ಯಾಸ್ ಗೀಸರ್‌ ಆನ್ ಮಾಡಿಕೊಂಡು ಸ್ನಾನ ಮಾಡುತ್ತಿದ್ದ ಸಂಪದಾ ಎಂಬುವರು ಉಸಿರುಗಟ್ಟಿ ಸ್ನಾನದ ಕೊಠಡಿಯಲ್ಲೇ ಮೃತಪಟ್ಟಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಈ ಅವಘಡ ಸಂಭವಿಸಿದೆ. 

‘ಎಂಬಿಬಿಎಸ್ ವಿದ್ಯಾರ್ಥಿನಿ ಸಂಪದಾ, ಸೆಪ್ಟೆಂಬರ್ 4ರಂದು ಸ್ನಾನಕ್ಕೆ ಹೋಗಿದ್ದರು. ಗ್ಯಾಸ್ ಗೀಸರ್ ಆನ್ ಮಾಡಿಕೊಂಡು ಬಿಸಿನೀರಿನಲ್ಲಿ ಸ್ನಾನ ಮಾಡುತ್ತಿದ್ದರು. ಅದೇ ಸಂದರ್ಭದಲ್ಲೇ ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿತ್ತೆಂದು ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

‘ಸ್ನಾನದ ಕೊಠಡಿಯಲ್ಲೇ ಉಸಿರುಗಟ್ಟಿ ಸಂಪದಾ ಮೃತಪಟ್ಟಿದ್ದಾರೆ. ಬಹಳ ಸಮಯವಾದರೂ ಕೊಠಡಿಯಿಂದ ಹೊರಬರದಿದ್ದಾಗ ಸ್ನೇಹಿತೆಯರು ಆತಂಕಗೊಂಡಿದ್ದರು. ಕೊಠಡಿ ಬಾಗಿಲಿನ ಬೀಗ ಮುರಿದು ಒಳ ನೋಡಿದಾಗಲೇ ವಿಷಯ ಗೊತ್ತಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು