ಮಂಗಳವಾರ, ಏಪ್ರಿಲ್ 13, 2021
28 °C

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ ಗುಪ್ತ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಾಲಿಕೆ ಸದಸ್ಯರ ಅವಧಿ ಮುಕ್ತಾಯವಾದ ನಂತರ ಸರ್ಕಾರದ ಆದೇಶದಂತೆ ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಐಎಎಸ್ ಹಿರಿಯ ಅಧಿಕಾರಿ ಗೌರವ ಗುಪ್ತ ಅಧಿಕಾರ ಸ್ವೀಕರಿಸಿದರು.

ಗೌರವ ಗುಪ್ತ ಅವರನ್ನು ಆಯುಕ್ತ ಎನ್. ಮಂಜುನಾಥಪ್ರಸಾದ್ ಬರ ಮಾಡಿಕೊಂಡರು. 

‘ಕೋವಿಡ್ ವಿಷಯವನ್ನು ಪಾಲಿಕೆ ಗಂಭೀರವಾಗಿ ಪರಿಗಣಿಸಿ ನಿಯಂತ್ರಣಕ್ಕಾಗಿ ಸಾಕಷ್ಟು ಕೆಲಸ ಮಾಡಿದೆ. ಆಗಿರುವ ಕೆಲಸದ ಬಗ್ಗೆ ಸಮೀಕ್ಷೆ ನಡೆಸಿ ಮುಂದೆ ಆಗಬೇಕಿರುವ ಕೆಲಸಗಳ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜತೆ ಚರ್ಚೆ ನಡೆಸುತ್ತೇನೆ’ ಎಂದರು.

‘ವಾರ್ಡ್‌ ಮಟ್ಟದಲ್ಲಿ ಜನರೊಟ್ಟಿಗಿದ್ದು ಕೆಲಸ ಮಾಡುತ್ತಿದ್ದ ಪಾಲಿಕೆ ಸದಸ್ಯರ ಅವಧಿ ಮುಗಿದಿದ್ದರೂ ಎಲ್ಲರ ಸಹಕಾರ ಪಡೆದು ಕಾರ್ಯನಿರ್ವಹಿಸುತ್ತೇವೆ. ಜನಪರವಾದ ಆಡಳಿತಕ್ಕೆ ಜನರ ಮತ್ತು ಜನಪ್ರತಿನಿಧಿಗಳ ಸಹಕಾರ ಮುಖ್ಯ’ ಎಂದು ಹೇಳಿದರು.

‘ಪ್ರತಿ ಮಳೆಗಾಲಕ್ಕೂ ಪಾಲಿಕೆ ಸಿದ್ಧವಾಗಿರುತ್ತದೆ. ಈಗ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಕೊರತೆಗಳಿದ್ದರೆ ಸರಿಪಡಿಸಲಾಗುವುದು’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು