ಬೆಂಗಳೂರು: ನಗರದಲ್ಲಿ ಉತ್ಪತ್ತಿಯಾಗುವ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್ಡಿಎಫ್) ಅನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸ್ವಚ್ಛ ಸರ್ವೇಕ್ಷಣಾ 2025-26ರ ಅಂಗವಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಅಂಜನಾಪುರ ವಾರ್ಡ್ ವ್ಯಾಪ್ತಿಯ ಪೌರಕಾರ್ಮಿಕರ ಮಸ್ಟರಿಂಗ್ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ‘ಪೌರಕಾರ್ಮಿಕರೊಂದಿಗೆ ಸಂವಾದ’ ನಡೆಸಿದ ಬಳಿಕ ಅವರು ಮಾತನಾಡಿದರು.

ಜಿಬಿಎ ವ್ಯಾಪ್ತಿಯಲ್ಲಿ ಈಗಾಗಲೇ ಪ್ರತಿದಿನ 520 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್ಡಿಎಫ್) ಸಂಗ್ರಹಿಸಲಾಗುತ್ತಿದ್ದು, ಅದನ್ನು ಸಿಮೆಂಟ್ ತಯಾರಿಕಾ ಘಟಕಗಳಿಗೆ ಕಳುಹಿಸಿ ಅದರಿಂದ ಇಪಿಆರ್ ಕ್ರೆಡಿಟ್ ಪಡೆಯಲಾಗುತ್ತಿದೆ. ಇದೇ ಮಾದರಿಯಲ್ಲಿ ನಾಗರಿಕರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಿ, ಮೂಲದಲ್ಲಿಯೇ ತ್ಯಾಜ್ಯವನ್ನು ವಿಂಗಡಿಸಿ ನೀಡುವ ಮೂಲಕ ಆರ್ಡಿಎಫ್ ಸಂಗ್ರಹವನ್ನು ಹೆಚ್ಚಿಸಬೇಕು. ಇದನ್ನು ರಸ್ತೆ ಡಾಂಬರೀಕರಣ ಕಾರ್ಯಗಳಲ್ಲಿ ಬಳಸಿಕೊಳ್ಳಬೇಕು ಎಂದರು.

‘ಯಾವ ಸಮಯಕ್ಕೆ ಕೆಲಸಕ್ಕೆ ಬರುತ್ತೀರಿ, ಎಷ್ಟು ಸಮಯ ಕೆಲಸ ಮಾಡುತ್ತೀರಿ, ಹಾಜರಾತಿ ಹೇಗೆ ಹಾಕುತ್ತೀರಿ, ಸುರಕ್ಷತಾ ಪರಿಕರಗಳನ್ನು ಬಳಸುತ್ತೀರಾ’ ಎಂಬ ವಿಷಯಗಳ ಬಗ್ಗೆ ಪೌರಕಾರ್ಮಿಕರಿಂದ ಮಹೇಶ್ವರ್ ರಾವ್ ಮಾಹಿತಿ ಪಡೆದರು.

ಜಿಬಿಎ ವ್ಯಾಪ್ತಿಯಲ್ಲಿ ಈಗಾಗಲೇ 190 ಸ್ಥಳಗಳಲ್ಲಿ ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳಿದ್ದು, ಪ್ರತಿಯೊಂದು ವಾರ್ಡ್ಗೆ ಒಂದರಂತೆ 369 ವಾರ್ಡ್ಗಳಲ್ಲಿಯೂ ಒಣ ತ್ಯಾಜ್ಯ ಸಂಗ್ರಹಣಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಯಾವ ವಾರ್ಡ್ಗಳಲ್ಲಿ ಘಟಕಗಳ ಅಗತ್ಯ ಇದೆ ಎಂಬುದನ್ನು ಪರಿಶೀಲಿಸಿ ಸ್ಥಳಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.