ಬೆಂಗಳೂರು: ‘ಬೆಂಗಳೂರನ್ನು ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು ಮಾಡಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದರು.

ಸುದ್ದಿಗಾರರ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಕಾಂಗ್ರೆಸ್ ಸರ್ಕಾರ ಮೂರು ಭಾಗ ಮಾಡಿದೆ. ಗ್ರೇಟರ್ ಬೆಂಗಳೂರಿನಿಂದ ಅಭಿವೃದ್ಧಿ ಸಾಧ್ಯವಿಲ್ಲ, ಜನರಿಗೆ ಅನಾನುಕೂಲಗಳೇ ಹೆಚ್ಚಾಗುತ್ತವೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ’ ಎಂದರು.

‘110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗುತ್ತದೆ’ ಎಂದು ಹೇಳಿದರು.

‘ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ–ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ, ಅಲ್ಲಿ ಕನ್ನಡಿಗರೇ ಮೇಯರ್ ಆಗುತ್ತಾರೆ ಎಂಬ ಖಚಿತತೆ ಇಲ್ಲ’ ಎಂದರು.

‘ಮುಖ್ಯಮಂತ್ರಿಯವರು ಪಾಲಿಕೆಯಿಂದ ಆಯ್ಕೆ ಆಗುವುದಿಲ್ಲ ಎಂದಾದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅವರನ್ನು ಹೇಗೆ ಅಧ್ಯಕ್ಷರನ್ನಾಗಿ ಮಾಡುತ್ತಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆ ಸಭೆಯಲ್ಲಿ ಬಂದು ಕೂರಲು ಸಾಧ್ಯವಿಲ್ಲ. ಬೆಂಗಳೂರು ಭಾಗ ಆಗಬಾರದು ಎಂಬುದು ಬಿಜೆಪಿಯ ಅಭಿಪ್ರಾಯ. ಮುಂದೆ ನಮ್ಮ ಸರ್ಕಾರ ಬಂದರೆ ಬೆಂಗಳೂರನ್ನು ಒಂದು ಮಾಡುವ ಕೆಲಸ ಮಾಡುತ್ತೇವೆ’ ಎಂದು ಅಶೋಕ ತಿಳಿಸಿದರು.

‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಲಾಭಕ್ಕೆ ಏನು ಬೇಕೋ ಎಲ್ಲವನ್ನೂ ಮಾಡುತ್ತಿದ್ದಾರೆ. ಬಿಡಿಎ ಲೇಔಟ್ಗಳು ಇನ್ನೂ ಖಾಲಿ ಇದ್ದು, ಅಲ್ಲಿಗೆ ನೀರು, ವಿದ್ಯುತ್ ಕೊಡಲು ಆಗುತ್ತಿಲ್ಲ. ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಈ ಯೋಜನೆ ಮಾಡಿದ್ದಾರೆ. ಎಲ್ಲ ಕಡೆ ಕಸದ ರಾಶಿ ಇದೆ; ಮೇಕೆದಾಟು ಯೋಜನೆ ಜಾರಿ ಮಾಡಿಲ್ಲ. ನಗರದ ಆಡಳಿತ ನಡೆಸಲು ಆಗುತ್ತಿಲ್ಲ. ಇಂತಹ ವಿಫಲತೆ ಒಪ್ಪಿಕೊಳ್ಳದೆ ಇಂತಹ ಯೋಜನೆ ಜಾರಿ ತಂದಿದ್ದಾರೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.