ಬೆಂಗಳೂರು: ಎಲ್ಲ ವಾರ್ಡ್ಗಳಲ್ಲಿ ವಿದ್ಯುತ್ ಉಳಿತಾಯ ಮಾಡುವ ಉದ್ದೇಶದಿಂದ ‘ಇಂಧನ ದಕ್ಷ ಎಲ್ಇಡಿ’ ಬೀದಿ ದೀಪಗಳನ್ನು ಅಳವಡಿಸುವ ಯೋಜನೆಯನ್ನು ಉತ್ತರ ನಗರ ಪಾಲಿಕೆಯಲ್ಲಿ ಜಾರಿಗೆ ತರಲಾಗಿದೆ.

ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಕಾರ್ಯಾದೇಶ ನೀಡಲಾಗಿದೆ. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮೂರು ವಾರ್ಡ್ಗಳು ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಐದು ಹೊಸ ವಾರ್ಡ್ಗಳಲ್ಲಿ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲಾಗುತ್ತದೆ.

ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,24,591 ಬೀದಿ ದೀಪಗಳಿದ್ದು, ಅದರಲ್ಲಿ 64,898 ಬೀದಿ ದೀಪಗಳಲ್ಲಿ ಎಲ್ಇಡಿ ಇಲ್ಲ. ಈಗಾಗಲೇ ಚಾಲ್ತಿಯಲ್ಲಿರುವ ದೀಪಗಳನ್ನು ‘ಇಂಧನ ದಕ್ಷ ಎಲ್ಇಡಿ’ ದೀಪಗಳಾಗಿ ಬದಲಾಯಿಸುವ ಕಾರ್ಯ ನಡೆಯುತ್ತಿದ್ದು, 37,257 ಎಲ್ಇಡಿ ಬೀದಿ ದೀಪ ಅಳವಡಿಸಲಾಗಿದೆ. ಈ ಯೋಜನೆಯ ಮೂಲಕ ವಿದ್ಯುತ್ ಬಳಕೆ ಕಡಿಮೆಯಾಗುವ ಜೊತೆಗೆ ಬೀದಿಗಳಲ್ಲಿ ಉತ್ತಮ ಬೆಳಕು ಒದಗಿಸುವುದಕ್ಕೂ ಸಹಕಾರಿಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.