ಬೆಂಗಳೂರು: ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವವಿಲ್ಲದ ಆರು ಪಿ.ಜಿ.ಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.

204 ಪೇಯಿಂಗ್ ಗೆಸ್ಟ್ಗಳನ್ನು ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ನೇತೃತ್ವದಲ್ಲಿ ಚಿಕ್ಕಪೇಟೆ ಮತ್ತು ಶಿವಾಜಿನಗರ ಆರೋಗ್ಯ ವೈದ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಶುಕ್ರವಾರ ತಪಾಸಣೆ ನಡೆಸಲಾಯಿತು. ಶುಚಿತ್ವ ಕಾಪಾಡದ 6 ಪಿ.ಜಿ.ಗಳಿಗೆ ಬೀಗ ಮುದ್ರೆ ಹಾಕಲಾಯಿತು. ನೂನ್ಯತೆಗಳಿರುವ ಪಿ.ಜಿ.ಗಳಿಗೆ ₹ 1.96 ಲಕ್ಷ ದಂಡ ವಿಧಿಸಲಾಯಿತು.

ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಎಫ್ಎಸ್ಎಸ್ಎಐ ಆಹಾರ ಸುರಕ್ಷತಾ ಪ್ರಮಾಣ ಪತ್ರ ಇತ್ಯಾದಿ ಮೂಲ ಸೌಕರ್ಯಗಳ ಬಗ್ಗೆ ತಪಾಸಣೆ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಪೇಯಿಂಗ್ ಗೆಸ್ಟ್ ಕಟ್ಟಡದ ಆಸ್ತಿ ತೆರಿಗೆ ಮತ್ತು ಇತರೆ ತೆರಿಗೆಗಳ ವಿಷಯವಾಗಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.