ಬೆಂಗಳೂರು: ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಷಯನಗರದಲ್ಲಿ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್ಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಂದ್ರು ಅವರಿಗೆ ಸೇರಿದ ನಿವೇಶನದಲ್ಲಿ 15 ಜಿಲೆಟಿನ್ ಕಡ್ಡಿಗಳು ಹಾಗೂ 30 ಡಿಟೊನೇಟರ್ಗಳು, ಒಂದು ಟ್ರ್ಯಾಕ್ಟರ್ ಹಾಗೂ ಜೆಸಿಬಿ ಯಂತ್ರ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

‘ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ನಿವೇಶನದ ಮಾಲೀಕ ಚಂದ್ರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಮೂಲಗಳು ಹೇಳಿವೆ.

‘ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹ ಮಾಡಿಕೊಂಡಿರುವುದು ಪತ್ತೆಯಾಗಿದೆ. ಪ್ರತಿನಿತ್ಯ ಮಧ್ಯಾಹ್ನ 10.30ರಿಂದ 2ರ ಒಳಗೆ ಕಲ್ಲುಬಂಡೆ ಒಡೆಯಲು ಈ ಸ್ಪೋಟಕಗಳನ್ನು ಬಳಕೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ, ದಾಳಿ ನಡೆಸಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆಯೇ ಕಾರ್ಮಿಕರು ಪರಾರಿ ಆಗಿದ್ದಾರೆ ಎಂದು ಮೂಲಗಳು ಹೇಳಿವೆ.ಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.