ಬೆಂಗಳೂರು: ‘ದಿ ಆರ್ಟ್ ಆಫ್ ಲಿವಿಂಗ್’ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಭಾನುವಾರ ನಗರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ನೈಸ್ ರಸ್ತೆಯ ಸಮೀಪದಲ್ಲೇ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿ, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.

ಎಚ್ಎಎಲ್ ಬಳಿ ಬಿಜೆಪಿ ರಾಜ್ಯ ಘಟಕ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದ ಬಳಿಕ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಿಗದಿ ಆಗಿತ್ತು. ಪ್ರಧಾನಿ ಸಾಗುವ ಮಾರ್ಗದಲ್ಲಿ ವಿಧ್ವಂಸಕ ಕೃತ್ಯ ತಡೆ ಪಡೆಯ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದರು. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿ ಸೇತುವೆಯ ಬಳಿ ಭಾನುವಾರ ಬೆಳಿಗ್ಗೆ 10.30ರ ಸುಮಾರಿಗೆ ಪರಿಶೀಲನೆ ನಡೆಸುತ್ತಿರುವಾಗ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಅವುಗಳನ್ನು ವಶಕ್ಕೆ ಪಡೆದು ಕಗ್ಗಲೀಪುರ ಠಾಣೆಗೆ ಕೊಂಡೊಯ್ದು ತನಿಖೆ ಮುಂದುವರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಇದಕ್ಕೂ ಮುನ್ನ ಬೆಳಿಗ್ಗೆ 7.30ರ ಸುಮಾರಿಗೆ ವ್ಯಕ್ತಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಎಚ್ಎಎಲ್ ಹಾಗೂ ಆರ್ಟ್ ಆಫ್ ಲಿವಿಂಗ್ ಬಳಿ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ. ಅತ್ತ ಜಿಲೆಟಿನ್ ಕಡ್ಡಿಗಳು ಸಿಕ್ಕಿದ ಬಳಿಕ ಎಚ್ಚೆತ್ತ ಕೋರಮಂಗಲ ಠಾಣೆಯ ಪೊಲೀಸರು, ಸಿಸಿಬಿ ಪೊಲೀಸರ ಜತೆಗೆ ಜಂಟಿ ಕಾರ್ಯಾಚರಣೆ ನಡೆಸಿ ಬೆದರಿಕೆ ಹಾಕಿದ್ದ ಲೋಹಿತ್ (40) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು.

‘ಕೋರಮಂಗಲದ ಮನೆಯಲ್ಲಿದ್ದ ಲೋಹಿತ್ನನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಆರೋಪಿಯ ವಿಚಾರಣೆ ಮುಂದುವರಿದಿದೆ. ಹಿಂದೆಯೂ ಗಣ್ಯರು ನಗರಕ್ಕೆ ಬಂದಾಗ ಈತ ಇದೇ ರೀತಿಯಲ್ಲಿ ಬೆದರಿಕೆ ಕರೆ ಮಾಡಿದ್ದ. ಆಗಲೂ ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ಭಾನುವಾರ ಬೆಳಿಗ್ಗೆಯೂ ಅದೇ ರೀತಿಯ ವರ್ತನೆ ತೋರಿದ್ದಾನೆ. ಕಗ್ಗಲೀಪುರದ ಬಳಿ ಸಿಕ್ಕಿರುವ ಜಿಲೆಟಿನ್ ಕಡ್ಡಿಗಳಲ್ಲಿ ಲೋಹಿತ್ ಪಾತ್ರವಿದೆಯೇ ಎಂಬುದರ ಕುರಿತೂ ತನಿಖೆ ನಡೆಸಲಾಗುತ್ತಿದೆ. ಲೋಹಿತ್ ಹಿನ್ನೆಲೆಯನ್ನೂ ಪರಿಶೀಲಿಸಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.

ಜಿಲೆಟಿನ್ ಕಡ್ಡಿಗಳನ್ನು ಉದ್ದೇಶಪೂರ್ವಕವಾಗಿ ರಸ್ತೆಬದಿಯಲ್ಲಿ ಇರಿಸಲಾಗಿತ್ತೇ ಅಥವಾ ಅದರ ಹಿಂದಿನ ಉದ್ದೇಶವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಕ್ವಾರಿಗಳಲ್ಲಿ ಕಲ್ಲುಗಳನ್ನು ಸ್ಫೋಟಿಸುವ ಉದ್ದೇಶದಿಂದ ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಿಡಲಾಗಿತ್ತೇ ಎಂಬ ಆಯಾಮದಲ್ಲೂ ತನಿಖೆ ಕೈಗೊಳ್ಳಲಾಗಿದೆ’ ಎಂದು ಮೂಲಗಳು ಹೇಳಿವೆ.

ಸ್ಥಳಕ್ಕೆ ಕೇಂದ್ರ ವಲಯದ ಐಜಿಪಿ ಎಸ್.ಗಿರೀಶ್ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಕಗ್ಗಲೀಪುರ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

‘ಜಿಲೆಟಿನ್ ಕಡ್ಡಿಗಳನ್ನು ಯಾರು ತಂದಿಟ್ಟಿದ್ದಾರೆ ಎಂಬುದು ಪತ್ತೆಯಾಗಿಲ್ಲ. ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮ ಆರಂಭಕ್ಕೂ ಒಂದೂವರೆ ತಾಸು ಮೊದಲು, ತಪಾಸಣೆ ನಡೆಸುವಾಗ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ನೈಸ್ ರಸ್ತೆ ಜಂಕ್ಷನ್ನಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ, ರಸ್ತೆಯಿಂದ 20 ಅಡಿಯಿಂದ 25 ಅಡಿ ದೂರದಲ್ಲಿರುವ ಕಾಂಪೌಂಡ್ ಬಳಿ ಅನುಮಾನಾಸ್ಪದ ಬ್ಯಾಗ್ವೊಂದನ್ನು ಕರ್ತವ್ಯ ನಿರತ ಕಾನ್ಸ್ಟೆಬಲ್ ಗಮನಿಸಿದ್ದರು. ಪರಿಶೀಲಿಸಿದಾಗ ಅದರಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಇರುವುದು ಕಂಡುಬಂದಿತ್ತು. ಪೊಲೀಸರು ತಕ್ಷಣವೇ ಜಿಲೆಟಿನ್ ಕಡ್ಡಿಗಳನ್ನು ತೆರವುಗೊಳಿಸಿ ಯಾವುದೇ ಅನಾಹುತ ಆಗದಂತೆ ಕ್ರಮ ಕೈಗೊಂಡಿದ್ದಾರೆ’ ಎಂದು ಕೇಂದ್ರ ವಲಯದ ಡಿಐಜಿ ಗಿರೀಶ್ ಮಾಹಿತಿ ನೀಡಿದ್ದಾರೆ.

ತನಿಖೆಗೆ ಆರು ತಂಡ ರಚನೆ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ತನಿಖೆಗೆ ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ಗೌಡ ನೇತೃತ್ವದಲ್ಲಿ 6 ವಿಶೇಷ ತಂಡಗಳನ್ನು ರಚಿಸಲಾಗಿದೆ. 50ಕ್ಕೂ ಹೆಚ್ಚು ಸಿಬ್ಬಂದಿ ಈ ತಂಡಗಳಲ್ಲಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಜಿಲೆಟಿನ್ ಕಡ್ಡಿ ಪತ್ತೆಯಾಗಿರುವ ಸ್ಥಳದ ಸುತ್ತ ಹಾಗೂ ಜಿಲ್ಲೆಯ ವಿವಿಧೆಡೆ ಇರುವ ಕಲ್ಲು ಕ್ವಾರಿಗಳಲ್ಲಿನ ಜಿಲೆಟಿನ್ ದಾಸ್ತಾನು, ಜಿಲೆಟಿನ್ ಕಡ್ಡಿಗಳನ್ನು ಸರಬರಾಜು ಮಾಡಿರುವ ವಿತರಕರ ವಿವರ ಹಾಗೂ ಗೋದಾಮುಗಳಲ್ಲಿನ ದಾಸ್ತಾನಗಳನ್ನು ಒಂದು ತಂಡ ಪರಿಶೀಲಿಸುತ್ತಿದೆ. ಮತ್ತೊಂದು ತಂಡ ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ.

ಹಲವೆಡೆ ವಾಹನಗಳ ದಟ್ಟಣೆ

ಎರಡು ಕಾರ್ಯ ಕ್ರಮಗಳಲ್ಲಿ ಭಾಗವಹಿ ಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಗರಕ್ಕೆ ಬಂದಿ ದ್ದರು. ಅವರ ಭೇಟಿ ಹಿನ್ನೆಲೆಯಲ್ಲಿ ಹಲವು ಮಾರ್ಗ ಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ, ಪರ್ಯಾಯ ಮಾರ್ಗ ಕಲ್ಪಿಸಲಾಗಿತ್ತು. ಅಲ್ಲಿಯೂ ವಾಹನ ದಟ್ಟಣೆ ಉಂಟಾಗಿ ಸವಾರರು ಹೈರಾಣಾದರು.

ಎಚ್ಎಎಲ್ ಬಳಿ ಬಿಜೆಪಿ ರಾಜ್ಯ ಘಟಕ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಂಡಿದ್ದರು. ಎಚ್ಎಎಲ್ ವಿಮಾನ
ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೇ ವಿಮಾನ
ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿ ವರೆಗೆ ವಾಹನಗಳ ಸಂಚಾರವನ್ನು ಬೆಳಿಗ್ಗೆ 5ರಿಂದಲೇ ನಿರ್ಬಂಧಿಸಲಾಗಿತ್ತು. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿತ್ತು. ಬೆಳಿಗ್ಗೆ 11ರ ವರೆಗೆ ಪರ್ಯಾಯ ಮಾರ್ಗ ದಲ್ಲೂ ವಾಹನಗಳು ಸಾಲುಗಟ್ಟಿ ನಿಂತಿ ದ್ದವು. ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆನೈಸ್ ರಸ್ತೆಯಲ್ಲಿ ಎಲ್ಲ ಮಾದರಿಯ ವಾಹನ ಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

ತುಮಕೂರು ರಸ್ತೆಯಿಂದ ನೈಸ್ ರಸ್ತೆಯ ಮೂಲಕ ಕನಕಪುರ ರಸ್ತೆ ಕಡೆಗೆ ತೆರಳುವ ವಾಹನ ಚಾಲಕರು, ಸವಾರರು ಪರದಾಡಿದರು. ಸಿಎಂಟಿಐ ಜಂಕ್ಷನ್ ಬಳಿ ಬಲಕ್ಕೆ ತಿರುವು ಪಡೆದು ರಾಜ್ಕುಮಾರ್ ಪುಣ್ಯಭೂಮಿ ರಸ್ತೆಯ ಮೂಲಕ ಅವಕಾಶ ಕಲ್ಪಿಸಲಾಗಿತ್ತು. ಅಲ್ಲಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸುಮ್ಮನಹಳ್ಳಿ ಜಂಕ್ಷನ್, ನಾಯಂಡ ಹಳ್ಳಿ ಜಂಕ್ಷನ್, ಹೊರ ವರ್ತುಲ ರಸ್ತೆ, ಕೆಂಗೇರಿ ವಿಷ್ಣುವರ್ಧನ್ ರಸ್ತೆಯಲ್ಲೂ ಕೆಲ ಸಮಯ ವಾಹನ ದಟ್ಟಣೆ ಉಂಟಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.