ಬೆಂಗಳೂರು: ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿಯ ಸೇತುವೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದ ತನಿಖೆಯನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ತೀವ್ರಗೊಳಿಸಿದ್ದು, ಎರಡು ದಿನ ಕಳೆದರೂ ಆರೋಪಿಗಳ ಸುಳಿವು ಸಿಕ್ಕಿಲ್ಲ.

ಜಿಲೆಟಿನ್ ಕಡ್ಡಿಗಳಿದ್ದ ಪೆಟ್ಟಿಗೆಯನ್ನು ಪ್ರಧಾನಿ ಸಾಗುವ ಮಾರ್ಗದಲ್ಲಿ ಉದ್ದೇಶಪೂರ್ವಕವಾಗಿ ಇಡಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ. ಆದರೆ, ಇವುಗಳನ್ನು ಯಾವ ಸಮಯದಲ್ಲಿ ತಂದು ಇರಿಸಲಾಗಿತ್ತು ಎಂಬುದು ಸ್ಪಷ್ಟವಾಗಿಲ್ಲ ಎಂದು ಮೂಲಗಳು ಹೇಳಿವೆ.

ಆರ್ಟ್ ಆಫ್ ಲೀವಿಂಗ್ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಭಾನುವಾರ ನಗರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಾಗಿದ ನೈಸ್ ರಸ್ತೆಯ ಸಮೀಪದಲ್ಲಿಯೇ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ರಟ್ಟಿನ ಪೆಟ್ಟಿಗೆಯಲ್ಲಿ ಜೆಲೆಟಿನ್ ಕಡ್ಡಿಗಳ ಜೊತೆಗೆ ಅಗರಬತ್ತಿ, ಬೆಂಕಿ ಕಡ್ಡಿಗಳು, ಕರ್ಪೂರದ ಖಾಲಿ ಡಬ್ಬಿಗಳು ಇದ್ದವು.

ಕನಕಪುರ ರಸ್ತೆ ಸಮೀಪದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಮಣ್ಣಿನ ರಸ್ತೆಯಿಂದ ಸುಮಾರು 20 ಅಡಿ ದೂರದಲ್ಲಿ ಬ್ಯಾಟರಿ ಪ್ಯಾಕ್, ವೈಯರ್, ಟೇಪ್ಗಳು, ಸರ್ಕಿಟ್ ಬೋರ್ಡ್ನಂತೆ ಕಾಣುವ ವಸ್ತುಗಳು ಪತ್ತೆಯಾಗಿವೆ ಎಂದು ಮೂಲಗಳು ಹೇಳಿವೆ. ಹಾಗಾಗಿ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ತನಿಖಾ ದಳ (ಎನ್ಐಎ), ಗುಪ್ತಚರ ಅಧಿಕಾರಿಗಳು ನಗರಕ್ಕೆ ಬಂದಿದ್ದು, ಮಾಹಿತಿ ಕಲೆಹಾಕುತ್ತಿದ್ದಾರೆ. ಬೆಂಗಳೂರು ನಗರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಪೊಲೀಸರಿಗೆ ಸಹಾಯ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಫೋಟಕ ಪೆಟ್ಟಿಗೆ ಪತ್ತೆಯಾದ ಸ್ಥಳದ ಅಸುಪಾಸಿನ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನದ ಮೇಲೆ ನಿಗಾ ವಹಿಸಿದ್ದಾರೆ. ಈ ಕೃತ್ಯದ ಹಿಂದೆ ಹೊರ ರಾಜ್ಯದ ನಂಟು ಇದೆಯೇ ಎಂಬ ಆಯಾಮದಲ್ಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸ್ಫೋಟಕಗಳು ಪತ್ತೆಯಾದ ಸ್ಥಳ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇಲ್ಲದಿರುವುದು ತನಿಖಾ ತಂಡಕ್ಕೆ ಸವಾಲಾಗಿದೆ. ಸ್ಫೋಟಕ ಇಟ್ಟಿರುವುದು ಯಾರೆಂದು ಈವರೆಗೂ ಸುಳಿವು ಸಿಕ್ಕಿಲ್ಲ.

ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ತನಿಖೆ ವೇಳೆ ಲಭಿಸಿದ ಸುಳಿವು ಆಧರಿಸಿ ವಿಶೇಷ ತನಿಖಾ ತಂಡವು ಹೊರ ರಾಜ್ಯಗಳಿಗೆ ಭೇಟಿ ನೀಡಿದೆ.

ಜಿಲೆಟಿನ್ ಕಡ್ಡಿ ಪತ್ತೆಯಾದ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾ ಇಲ್ಲದಿದ್ದರೂ ಪ್ರವೇಶ ದ್ವಾರಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿಯನ್ನು ತೀವ್ರವಾಗಿ ತಪಾಸಣೆ ನಡೆಸಲಾಗುತ್ತಿದೆ. ವಿವಿಧ ತಾಂತ್ರಿಕ ಕಾರ್ಯಾಚರಣೆಯಲ್ಲಿ ಪೊಲೀಸರು ತೊಡಗಿದ್ದಾರೆ.

ಜಿಲೆಟಿನ್ ಕಡ್ಡಿ ಪತ್ತೆಯಾದ ಸ್ಥಳದ ಸುತ್ತಮುತ್ತಲ ಕ್ವಾರಿ ಕಾರ್ಮಿಕರು ಹಾಗೂ ಮಾಲೀಕರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡು ಪೊಲೀಸ್ ಸಹಾಯವಾಣಿಗೂ ಕರೆ

ಪ್ರಧಾನಿ ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬೆದರಿಕೆ ಹಾಕಿ ಬಂಧಿತನಾಗಿರುವ ಆರೋಪಿ ಲೋಹಿತ್ನ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಕೋರಮಂಗಲ ನಿವಾಸಿಯಾದ ಲೋಹಿತ್ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಮೊಬೈಲ್ ಟವರ್ ಲೋಕೇಷನ್ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಲಾಯಿತು. ಲೋಹಿತ್ ರಾಜ್ಯ ಪೊಲೀಸ್ ಸಹಾಯವಾಣಿಗೆ ಕರೆ ಮಾಡುವುದಲ್ಲದೆ ತಮಿಳುನಾಡಿನ ಪೊಲೀಸ್ ಸಹಾಯವಾಣಿಗೂ ಕರೆ ಮಾಡಿದ್ದಾನೆ. ಜತೆಗೆ ರಾಜ್ಯ ಮತ್ತು ರಾಷ್ಟ್ರದ ಪ್ರತಿಷ್ಠಿತ ತನಿಖಾ ಸಂಸ್ಥೆಗಳ ಸಹಾಯವಾಣಿಗೂ ಕರೆ ಮಾಡಿರುವುದು ಗೊತ್ತಾಗಿದೆ. ಸದ್ಯದ ಮಾಹಿತಿ ಪ್ರಕಾರ ಆರೋಪಿ ಕೆಲ ತಿಂಗಳಿಂದ ಡಿಅಡಿಕ್ಷನ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಕಳೆದ ತಿಂಗಳ ಹಿಂದಷ್ಟೇ ಆತನನ್ನು ಅಲ್ಲಿಂದ ಕರೆತರಲಾಗಿತ್ತು. ಈ ವೇಳೆ ಜಸ್ಟ್ ಡಯಲ್ ಹಾಗೂ ಗೂಗಲ್ ಮೂಲಕ ಪೊಲೀಸ್ ಸಹಾಯವಾಣಿ ಸಂಖ್ಯೆ ಪಡೆದು ಕರೆ ಮಾಡಿದ್ದಾನೆ. ಜತೆಗೆ ಸಿಬಿಐ ಎನ್ಐಎ ಹಾಗೂ ಇತರೆ ತನಿಖಾ ಸಂಸ್ಥೆಗಳ ಸಂಖ್ಯೆಗಳು ಈತನ ಮೊಬೈಲ್ನಲ್ಲಿ ಪತ್ತೆಯಾಗಿವೆ. ಮತ್ತೊಂದೆಡೆ ಲೋಹಿತ್ ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿರುವುದಕ್ಕೆ ಸೂಕ್ತ ವೈದ್ಯಕೀಯ ದಾಖಲೆಗಳನ್ನು ಆತನ ಪೋಷಕರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯನ್ನು ರಾಜ್ಯ ಮತ್ತು ಕೇಂದ್ರ ಗುಪ್ತಚರ ಇಲಾಖೆ ಆಂತರಿಕ ಭದ್ರತಾ ವಿಭಾಗ(ಐಎಸ್ಡಿ) ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇದರೊಂದಿಗೆ ಪ್ರಮುಖವಾಗಿ ತಮಿಳುನಾಡಿನ ಉಗ್ರ ನಿಗ್ರಹ ಪಡೆ (ಎಟಿಎಸ್)ಯ ಅಧಿಕಾರಿಗಳು ಲೋಹಿತ್ನ ವಿಚಾರಣೆ ನಡೆಸಿದ್ದಾರೆ. ಆದರೆ ಪ್ರತಿಯೊಂದು ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ಒಂದೊಂದು ಉತ್ತರ ನೀಡುತ್ತಿದ್ದಾನೆ. ಹೀಗಾಗಿ ಆತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ನಿಮ್ಹಾನ್ಸ್ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಲೋಹಿತ್ ಕರೆ ಮಾಡಿದ ದಿನವೇ ಎರಡು ಜಿಲೆಟಿನ್ ಕಡ್ಡಿ ಉದುಬತ್ತಿ ಕರ್ಪೂರ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೀಗಾಗಿ ಲೋಹಿತ್ ಕರೆಗೂ ಜಿಲೆಟಿನ್ ಕಡ್ಡಿ ಪತ್ತೆಗೂ ಸಂಬಂಧ ಇದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.