ಬೆಂಗಳೂರು: ನಗರದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳ ಸಂಖ್ಯೆ ಹೆಚ್ಚಳವಾಗಿದೆ. ಏಪ್ರಿಲ್ 30ರ ವೇಳೆಗೆ ಒಟ್ಟು 5,35,815 ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಹೆಚ್ಚಿನ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಅಪರಾಧ ತಡೆಗಟ್ಟುವಿಕೆ, ಪತ್ತೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಬಲಪಡಿಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಮಾಹಿತಿ ನೀಡಿದರು.

ನಗರದಲ್ಲಿ ಸಾರ್ವಜನಿಕರ ಭದ್ರತೆ ಮತ್ತು ಅಪರಾಧ ನಿಯಂತ್ರಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಎಂಸಿಸಿಟಿಎನ್ಎಸ್ (ಮೊಬೈಲ್ ಕಂಪ್ಯಾನಿಯನ್ ಫಾರ್ ಕ್ರೈಂ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಸಿಸ್ಟಂ) ವ್ಯವಸ್ಥೆಯಡಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಜಿಯೊ ಟ್ಯಾಗಿಂಗ್ ಕಾರ್ಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

2024ರ ಜನವರಿ 1ರ ವೇಳೆಗೆ 2,32,711 ಸಿಸಿಟಿವಿ ಕ್ಯಾಮೆರಾಗಳಿದ್ದವು. ಕಳೆದ ಒಂದು ವರ್ಷದ ಅವಧಿಯಲ್ಲಿ ಅಂದಾಜು 3 ಲಕ್ಷಕ್ಕೂ ಹೆಚ್ಚು ಹೊಸ ಕ್ಯಾಮೆರಾಗಳನ್ನು ಜಿಯೊ ಟ್ಯಾಗ್ ಮಾಡಿರುವುದು ದಾಖಲೆಯಾಗಿದೆ ಎಂದು ಮಾಹಿತಿ ನೀಡಿದರು.

ಜನವಸತಿ ಪ್ರದೇಶಗಳು, ವ್ಯಾಪಾರಿ ಕೇಂದ್ರಗಳು, ಮುಖ್ಯರಸ್ತೆಗಳು, ಸಿಗ್ನಲ್ಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬ್ಯಾಂಕ್ಗಳು ಸೇರಿ ಇತರೆ ಮಹತ್ವದ ಸ್ಥಳಗಳಲ್ಲಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಡಿಜಿಟಲ್ ಜಿಯೊ ಟ್ಯಾಗಿಂಗ್ ಡೇಟಾ ಪೊಲೀಸ್ ಇಲಾಖೆಗೆ ನಿಖರ ಸ್ಥಳಾನುಸಾರ ಮಾಹಿತಿ ನೀಡುವುದರ ಮೂಲಕ ಅಪರಾಧ ಪ್ರಕರಣಗಳ ತನಿಖೆ ಹಾಗೂ ಕಾರ್ಯಾಚರಣೆಯನ್ನು ನಡೆಸಲು ನೆರವಾಗುತ್ತಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.