ಶುಕ್ರವಾರ, ಆಗಸ್ಟ್ 19, 2022
22 °C

ಗುಲಾಂ ನಬಿ ಆಜಾದ್‌ ಪದ್ಮ ಪ್ರಶಸ್ತಿ ಹಿಂತಿರುಗಿಸಲಿ- ಬಿ.ಕೆ.ಚಂದ್ರಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕಾಂಗ್ರೆಸ್‌ ಮುಖಂಡ ಗುಲಾಂ ನಬಿ ಆಜಾದ್‌ ಅವರನ್ನು ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿರು
ವುದು ವಿವಾದವನ್ನು ಸೃಷ್ಟಿಸಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳಿಗಾಗಿ ಸದಾ ಹೋರಾಡುತ್ತಾ ಬಂದಿರುವ ಹಾಗೂ ಜಮ್ಮು ಮತ್ತು ಕಾಶ್ಮೀರದ ಜನತೆ ವಿಚಾರದಲ್ಲಿ ಬದ್ಧತೆ ಹೊಂದಿರುವ ಆಜಾದ್‌ ಅವರು ಈ ಪ್ರಶಸ್ತಿಯನ್ನು ತಿರಸ್ಕರಿಸುವುದನ್ನು ನಾನು ನಿರೀಕ್ಷಿಸುತ್ತೇನೆ’ ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ.ಚಂದ್ರಶೇಖರ್‌ ಹೇಳಿದ್ದಾರೆ.

‘ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದ ಜನತೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಳೆದಿದ್ದ ಸರ್ವಾಧಿಕಾರಿ ನಿಲುವನ್ನು ಆಜಾದ್‌ ಅವರು ಸದಾ ವಿರೋಧಿಸುತ್ತಾ ಬಂದಿದ್ದರು. ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುವ ಹಿಂದಿನ ಕಾರ್ಯಸೂಚಿ ಸ್ಪಷ್ಟವಾಗಿದೆ. ಆಜಾದ್‌ ಅವರು ಈ ಪ್ರಶಸ್ತಿಯನ್ನು ನಿರಾಕರಿಸುವ ತಮ್ಮ ನಿಲುವನ್ನು ಇದುವರೆಗೂ ಪ್ರಕಟಿಸದಿರುವುದು ಅಚ್ಚರಿ ತಂದಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು