ಬೆಂಗಳೂರು: ಆರು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿ ನೀಲಗಿರಿ ತೋಪಿನಲ್ಲಿ ಮೃತದೇಹ ಎಸೆದು ಹೋಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರ್ಷದ ಹಿಂದೆ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ಅಸ್ಸಾಂ ದಂಪತಿ, ಪುತ್ರಿ ರುಮಿಯಾ ಜತೆ ವಿಟ್ಲಸಂದ್ರದ ಬಳಿ ವಾಸವಿದ್ದರು. ತಂದೆ ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದರೆ, ತಾಯಿ ಅಪಾರ್ಟ್ಮೆಂಟ್ನಲ್ಲಿ ಮನೆ ಕೆಲಸಕ್ಕೆ ಹೋಗುತ್ತಿದ್ದರು. ಗುರುವಾರ ಸಂಜೆ ಮನೆ ಬಳಿ ಆಟವಾಡುತ್ತಿದ್ದ ರುಮಿಯಾ ಕಾಣೆಯಾಗಿದ್ದಳು.

ಮಗಳು ನಾಪತ್ತೆಯಾಗಿರುವ ವಿಷಯ ಗೊತ್ತಾಗುತ್ತಿದ್ದಂತೆ ತಂದೆ ಅಕ್ಕಪಕ್ಕದ ಮನೆಗಳಲ್ಲಿ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಬಳಿಕ ಪೊಲೀಸರಿಗೆ ದೂರು ನೀಡಿದರು.

ಪೊಲೀಸರು ಹುಡುಕಾಟ ನಡೆಸಿದಾಗ, ವಿಟ್ಲಸಂದ್ರದ ನೀಲಗಿರಿ ತೋಪಿನಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಕತ್ತು ಹಿಸುಕಿ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ಇದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.