ಬುಧವಾರ, ಜನವರಿ 22, 2020
16 °C

ಬಾಲಕಿ ರಕ್ಷಿಸಿದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮನೆ ತೊರೆದು ಬಂದಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ಯುತ್ತಿದ್ದ ಇಬ್ಬರು ಯುವಕರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದು, ಅಪಾಯಕ್ಕೆ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ್ದಾರೆ.

ಮೈಸೂರಿನ ಬಾಲಕಿ ಪೋಷಕರ ಜೊತೆ ಜಗಳ ಮಾಡಿಕೊಂಡು ರೈಲಿನಲ್ಲಿ ನಗರಕ್ಕೆ ಬಂದಿದ್ದಳು. ಶುಕ್ರವಾರ ರಾತ್ರಿ 11.45ರ ಸುಮಾರಿಗೆ ಕ್ವೀನ್ಸ್ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಆಕೆಯನ್ನು ಮಾತನಾಡಿಸಿದ್ದ ಯುವಕರಿಬ್ಬರು ಹಣ ಕೊಡುವುದಾಗಿ ಹೇಳಿ ತಮ್ಮೊಂದಿಗೆ ಕರೆದೊಯ್ಯುತ್ತಿದ್ದರು.

ಅನುಮಾನಗೊಂಡ ಸಾರ್ವಜನಿಕರೊಬ್ಬರು ಹೈಗ್ರೌಂಡ್ಸ್ ಠಾಣೆಗೆ ವಿಷಯ ತಿಳಿಸಿದ್ದರು. ಗಸ್ತಿನಲ್ಲಿದ್ದ ಎಸ್.ಆರ್.ಅರಿಬೆಂಚಿ, ಜ್ಯೋತಿಬಾಯಿ ಹಾಗೂ ಚಂದ್ರಕಲಾ ಅವರು ಹೊಯ್ಸಳ ವಾಹನದಲ್ಲಿ ಸ್ಥಳಕ್ಕೆ ತೆರಳಿದ್ದರು. ಬಾಲಕಿಯನ್ನು ರಕ್ಷಿಸಿ, ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಸದ್ಯ ಬಾಲಕಿ ಬಾಲಮಂದಿರದಲ್ಲಿದ್ದಾಳೆ. ಆಕೆ ಪೋಷಕರಿಗೂ ಮಾಹಿತಿ ನೀಡಲಾಗಿದೆ.

ಬಾಲಕಿಯನ್ನು ರಕ್ಷಿಸಿದ ಸಿಬ್ಬಂದಿಯ ಕೆಲಸಕ್ಕೆ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಸಾ ಪತ್ರ ನೀಡಿದ್ದಾರೆ. 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು