ಸೋಮವಾರ, ಅಕ್ಟೋಬರ್ 26, 2020
23 °C

ಬಾಲಕಿ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಿಂದ ಸೆ. 18ರಂದು ಅಪಹರಣವಾಗಿದ್ದ ಐದು ವರ್ಷದ ಬಾಲಕಿಯನ್ನು ತಮಿಳುನಾಡಿನ ಕನ್ಯಾಕುಮಾರಿ ಪೊಲೀಸರು ರಕ್ಷಿಸಿದ್ದು, ಆಕೆಯನ್ನು ಅಪಹರಣ ಮಾಡಿದ್ದ ದಂಪತಿಯನ್ನು ಬಂಧಿಸಿ ನಗರದ ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಸತ್ಯಮೂರ್ತಿ ಮತ್ತು ಕಾರ್ತಿಕೇಶ್ವರಿ ದಂಪತಿ ಪುತ್ರಿ ಲೋಕಿತಾಳನ್ನು ಆರೋಪಿಗಳು ಅಪಹರಿಸಿದ್ದರು. ಈ ಸಂಬಂಧ ಬಾಲಕಿಯ ಅಜ್ಜ ವಿಜಯಕುಮಾರ್ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಾಲಕಿಯನ್ನು ಪೋಷಕರ ಸುಪರ್ದಿಗೆ ನೀಡಲಾಗಿದೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.