ಮಂಗಳವಾರ, ಜೂನ್ 28, 2022
25 °C

ಬಾಲಕಿಯರಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ: ಮಹಿಳೆಗೆ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬ್ಯೂಟಿ ಪಾರ್ಲರ್‌ಗಳಲ್ಲಿ ತರಬೇತಿ ಸಹಿತವಾಗಿ ಕೆಲಸ ಕೊಡಿಸುವ ಆಮಿಷವೊಡ್ಡಿ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ ಅಪರಾಧಿ ರೋಜಿ ಸುಬ್ರಮಣಿ ಎಂಬಾಕೆಗೆ 14 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ ನ್ಯಾಯಾಲಯ ಆದೇಶ ಹೊರಡಿಸಿದೆ.

ಪೀಣ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ವಿಚಾರಣೆಯನ್ನು ನ್ಯಾಯಾಧೀಶರಾದ ಎನ್‌. ರೂಪಾ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದಿಸಿದ್ದರು.

ಟಿ. ದಾಸರಹಳ್ಳಿ ನಿವಾಸಿಯಾದ ಅಪರಾಧಿ ರೋಜಿ, ತನ್ನ ಮನೆಯಲ್ಲೇ ಬಾಲಕಿಯರನ್ನು ಇರಿಸಿಕೊಂಡಿದ್ದಳು. ಅವರಿಗೆ ನಾನಾ ಆಮಿಷಗಳನ್ನು ತೋರಿಸಿ ವೇಶ್ಯಾವಾಟಿಕೆಗೆ ತಳ್ಳಿದ್ದಳು. ಗ್ರಾಹಕರನ್ನು ಮನೆಗೆ ಕರೆಸುತ್ತಿದ್ದಳು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೊಲೀಸರ ದಾಳಿ ಮಾಡಿ, ರೋಜಿಯನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.