ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಗುಣಮಟ್ಟ ಕಾಪಾಡಲು ಸೂಚನೆ

ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಮುಖ್ಯ ಆಯುಕ್ತ
Last Updated 9 ಸೆಪ್ಟೆಂಬರ್ 2021, 2:51 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮುಖ್ಯ ರಸ್ತೆಗಳು, ಉಪಮುಖ್ಯ ರಸ್ತೆಗಳು ಹಾಗೂ ಅತಿ ದಟ್ಟಣೆ ಕಾರಿಡಾರ್‌ಗಳಲ್ಲಿನ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕ್ರಮಕೈಗೊಂಡಿದೆ.

ಪುಲಿಕೇಶಿನಗರ ಕ್ಷೇತ್ರದ ವ್ಯಾಪ್ತಿಯ ಬೋರ್ ಬಂಡ್ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ ಭಾಗವನ್ನು ದುರಸ್ತಿಪಡಿಸುವ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ಬುಧವಾರ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಂಡಿ ಬಿದ್ದಿರುವ ಸ್ಥಳವನ್ನು ಮೊದಲು ಸ್ವಚ್ಛಗೊಳಿಸಬೇಕು. ಕಾಮಗಾರಿಯ ಗುಣಮಟ್ಟ ಕಾಪಾಡಬೇಕು. ಹೆಚ್ಚು ಗುಂಡಿಗಳು ಬಿದ್ದಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ಗುಂಡಿ ಮುಚ್ಚಬೇಕು. ಕಾಮಗಾರಿ ಸಂದರ್ಭದಲ್ಲಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ನಗರದ ಎಲ್ಲ ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಸಮರೋಪಾದಿಯಲ್ಲಿ ಮುಚ್ಚಲಾಗುತ್ತಿದೆ. ಕಣ್ಣೂರಿನಲ್ಲಿರುವ ಪಾಲಿಕೆಯ ಜಲ್ಲಿ–ಬಿಸಿ ಡಾಂಬರು ಮಿಶ್ರಣ ಘಟಕದಿಂದ ಅಗತ್ಯಕ್ಕೆ ತಕ್ಕಂತೆ ಮಿಶ್ರಣವನ್ನು ಪಡೆದು ತ್ವರಿತಗತಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವಂತೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

ಶಾಸಕ ಅಖಂಡ ಶ್ರೀನಿವಾಸಮೂರ್ತಿ, ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್‌.ಪ್ರಹ್ಲಾದ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT