ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ: ನಲ್ಲೂರಹಳ್ಳಿ ನಾಗೇಶ್

Published 26 ಮಾರ್ಚ್ 2024, 16:13 IST
Last Updated 26 ಮಾರ್ಚ್ 2024, 16:13 IST
ಅಕ್ಷರ ಗಾತ್ರ

ಕೆ.ಆರ್.ಪುರ: ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಮುನ್ನಡೆ ತಂದುಕೊಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಲ್ಲೂರಹಳ್ಳಿ ನಾಗೇಶ್ ತಿಳಿಸಿದರು.

ಮಹದೇವಪುರ ಕ್ಷೇತ್ರದ ಮಾರತ್ತಹಳ್ಳಿ, ಬಿದರಹಳ್ಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಬೆನ್ನೆಲುಬಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪತ್ತೆ ಪುಟಿದೇಳಲಿದೆ. ಮಹದೇವಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನದೇ ಆದ ನೆಲೆಹೊಂದಿದ್ದು, ಮುಂದಿನ ದಿನಗಳಲ್ಲಿ ಪಾರಮ್ಯ ಮತ್ತೆ ಸ್ಥಾಪಿಸಲಿದೆ’ ಎಂದರು.

ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲೀ ಖಾನ್ ಮಾತನಾಡಿ, ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಹಲವು ಸಭೆಗಳನ್ನು ನಡೆಸಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ನುಡಿದರು.

ಪಾಲಿಕೆ ಮಾಜಿ ಸದಸ್ಯ ಉದಯ್ ಕುಮಾರ್, ಮಾಜಿ ಸಚಿವ ನಾಗೇಶ್, ಕೆಪಿಸಿಸಿ ಸದಸ್ಯ ಜಯರಾಮರೆಡ್ಡಿ, ಮುಖಂಡರಾದ ಎಂಸಿಸಿ ರವಿ, ಗೊವಿಂದರಾಜು, ದೀಪಕ್ ರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT