ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ: ನಟಿ ಪೂಜಾ ಗಾಂಧಿ

Published 21 ಜನವರಿ 2024, 15:25 IST
Last Updated 21 ಜನವರಿ 2024, 15:25 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಿ, ಅಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು’ ಎಂದು ನಟಿ ಪೂಜಾ ಗಾಂಧಿ ಹೇಳಿದರು.

‘ಶಿಕ್ಷಣ ತಂಡ’ ಶನಿವಾರ ಆಯೋಜಿಸಿದ್ದ ‘ಶಿಕ್ಷಣ ಅವಾರ್ಡ್ಸ್‌’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಗಳ ಉನ್ನತೀಕರಣವಾದರೆ ಮಾತ್ರ ಅಲ್ಲಿ ಕಲಿಯುವ ಮಕ್ಕಳ ಜೀವನದಲ್ಲಿ ಬೆಳಕು ಮೂಡಲು ಸಾಧ್ಯ. ನಾನು ‘ಶಿಕ್ಷಣ ತಂಡ’ದೊಂದಿಗೆ ಕೈಜೋಡಿಸಿ ಶಾಲೆಗಳ ಅಭಿವೃದ್ಧಿಗೆ ಕೆಲಸ ಮಾಡುವೆ’ ಎಂದು ತಿಳಿಸಿದರು.

ಐಪಿಎಸ್‌ ಅಧಿಕಾರಿ ರವಿ ಡಿ. ಚನ್ನಣ್ಣನವರ್ ‘ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಚಲ ಬಿಡದೆ ಓದಿ ಉನ್ನತ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಜೀವನದಲ್ಲಿ ಯಶಸ್ವಿಯಾಗಬೇಕು’ ಎಂದು ಕರೆ ನೀಡಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಭರವಸೆ ತಂಡ, ಕನ್ನಡ ಮನಸುಗಳು ತಂಡ, ಗಂಧದ ಗುಡಿ ಬಳಗ, ಅಮೃತ ಹಸ್ತ ತಂಡ ಮತ್ತು ಡಿಸ್ಕಷನ್ ಕ್ಲಾಸ್ ಅಸೋಸಿಯೇಷನ್ ತಂಡಗಳಿಗೆ ‘ಶಿಕ್ಷಣ ಅವಾರ್ಡ್ಸ್‌’ ಪ್ರದಾನ ಮಾಡಲಾಯಿತು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಶಿಕ್ಷಣ ತಂಡದ ಸದಸ್ಯ ವಿನೋದ್ ಕರ್ತವ್ಯ, ಶಂಕರ, ಅಂತೋನಿ, ಗಜೇಂದ್ರ, ಕುಸುಮ ಕುಮಾರ್, ಡಿಆರ್‌ಡಿಒ ವಿಜ್ಞಾನಿ ಶ್ರೀನಿವಾಸನ್‌ ಭಾಗವಹಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT