ಬುಧವಾರ, ಆಗಸ್ಟ್ 4, 2021
27 °C

ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೃಷಿ ವಿಶ್ವವಿದ್ಯಾಲಯದ ವತಿಯಿಂದ ರೈತರಿಗೆ ಹಾಗೂ ರೈತ ಮಹಿಳೆಯರಿಗೆ ನೀಡಲಾಗುವ ಈ ಸಾಲಿನ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯಮಟ್ಟದ ಪ್ರಶಸ್ತಿಗಳು: ಎಚ್.ಡಿ.ದೇವೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ-ರೈತ ಮಹಿಳೆ ಪ್ರಶಸ್ತಿ, ಸಿ.ಭೈರೇಗೌಡ ರೈತ, ರೈತ ಮಹಿಳೆ ಪ್ರಶಸ್ತಿ, ಎಂ.ಎಚ್.ಮರಿಗೌಡ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ, ರೈತ ಮಹಿಳೆ ಹಾಗೂ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ, ರೈತ ಮಹಿಳೆ ಪ್ರಶಸ್ತಿ.

ಜಿಲ್ಲಾಮಟ್ಟದಲ್ಲಿ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ತಾಲ್ಲೂಕು ಮಟ್ಟದಲ್ಲಿ ರೈತ, ಯುವ ರೈತ ಹಾಗೂ ಯುವ ರೈತ ಮಹಿಳೆ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದು. ಕೃಷಿ ಮೇಳದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರ ಕಚೇರಿ ಹಾಗೂ ವಿಸ್ತರಣಾ ನಿರ್ದೇಶಕರ ಕಚೇರಿಯಿಂದ (ಜಿಕೆವಿಕೆ) ಪಡೆಯಬಹುದು. ಅರ್ಜಿಗಳು ಕೃಷಿ ವಿಶ್ವವಿದ್ಯಾಲಯದ ವೆಬ್‍ಸೈಟ್‌ನಲ್ಲೂ (www.uasbangalore.edu.in) ಲಭ್ಯ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ.

ಸಂಪರ್ಕ:080-23330153
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು