ಶುಕ್ರವಾರ, ಜನವರಿ 27, 2023
24 °C

ಬೆಂಗಳೂರು | ಕೃಷಿ ಮೇಳ: ಪ್ರೋಮೊ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಜಿಕೆವಿಕೆ) ನ.3 ರಿಂದ ನ.6ರ ವರೆಗೆ ತನ್ನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಕೃಷಿ ಮೇಳದ ಪ್ರೋಮೊ ಬಿಡುಗಡೆಯಾಗಿದ್ದು, ಚಲನಚಿತ್ರ ನಟ ವಿಜಯ್ ರಾಘವೇಂದ್ರ ಹಾಗೂ ನಟಿ ಹರ್ಷಿಕಾ ಪೂಣಚ್ಚ ಪ್ರೋಮೊದಲ್ಲಿ ಕಾಣಿಸಿಕೊಂಡಿದ್ದಾರೆ. 

ವಿವಿಯ ಕುಲಪತಿ ಡಾ.ಕೆ.ಸಿ. ನಾರಾಯಣಸ್ವಾಮಿ ಅವರು ನಗರದಲ್ಲಿ ಮಂಗಳವಾರ ಪ್ರೋಮೊ ಬಿಡುಗಡೆ ಮಾಡಿದರು.
1.11 ನಿಮಿಷದ ಪ್ರೋಮೊದಲ್ಲಿ, ಮೇಳಕ್ಕೆ ಆಹ್ವಾನ ನೀಡಲಾಗಿದೆ. 

‘ಕೃಷಿ ಮತ್ತು ಕೃಷಿಕರ ಬಗ್ಗೆ ವಿಜಯ್ ರಾಘವೇಂದ್ರ ಹಾಗೂ ಹರ್ಷಿಕಾ ಪೂಣಚ್ಚ ವಿಶೇಷ ಆಸಕ್ತಿ ಹೊಂದಿದ್ದಾರೆ. ಅವರ ಮನವಿಯಿಂದಾಗಿ ಈ ಬಾರಿ ಕೃಷಿ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ಡಾ.ಕೆ.ಸಿ. ನಾರಾಯಣಸ್ವಾಮಿ ಹೇಳಿದರು.

‘ಸಮಾಜದ ಗಣ್ಯವ್ಯಕ್ತಿಗಳು ಕೃಷಿ ಮತ್ತು ಕೃಷಿಕರ ಬಗ್ಗೆ ಮೆಚ್ಚುಗೆಯ ಮಾತನಾಡಿ, ಕೃಷಿಪರ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕೃಷಿಯತ್ತ ಒಲವು ತೋರುತ್ತಾರೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು